ಬೆಂಗಳೂರು: ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿಲ್ಲ, ತಿದ್ದುಪಡಿ ಬಗ್ಗೆ ಅವರು ಮಾತಾಡಿರೋದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿದ್ದಾರೆ.
ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೊಟ್ಟಿಲ್ಲ. ಡಿಕೆಶಿ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂಬ ಬಿಜೆಪಿ ನಾಯಕರ ಆಗ್ರಹಕ್ಕೆ ವಿಧಾನಸೌಧದಲ್ಲಿ ಅವರು ಪ್ರತಿಕ್ರಿಯೆ ನೀಡಿದರು.
ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದಾಗ ಕೂಡಲೇ ಯಾಕೆ ಹೆಗಡೆ ವಿರುದ್ಧ ಕ್ರಮ ತೆಗೆದುಕೊಳ್ಳಲಿಲ್ಲ. ಡಿಕೆಶಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಲ್ಲ. ತಿದ್ದುಪಡಿ ಬಗ್ಗೆ ನ್ಯಾಯಾಲಯದ ಉಲ್ಲೇಖ ಮಾಡಿ ಮಾತಾಡಿದ್ದಾರೆ ಎಂದರು.
ಬಿಜೆಪಿ ಅವರಿಂದ ನಾವು ಸಂವಿಧಾನದ ಬಗ್ಗೆ ಕಲಿಯೋ ಅವಶ್ಯಕತೆ ಇಲ್ಲ. ಸಂವಿಧಾನ ರಕ್ಷಣೆ ನಮ್ಮ ಪಕ್ಷದ ನಿಲುವು. 371 ಜೆ ತಿದ್ದುಪಡಿ ಅಲ್ಲವಾ? ನಾವು ಅದನ್ನ ಮಾಡಿದ್ದು. ಕಾಲಕಾಲಕ್ಕೆ ತಿದ್ದುಪಡಿ ಮಾಡಿಕೊಳ್ಳಬಹುದು ಅಂತ ಅಂಬೇಡ್ಕರ್ ಅವರೇ ಹೇಳಿದ್ದಾರೆ ಎಂದರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4