ಬೆಂಗಳೂರು: ನಿರಂತರ ಆದಾಯ ಹೆಚ್ಚಳ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ಗುರುವಾರ ದೆಹಲಿ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಬೆಂಗಳೂರು ನಿವಾಸ ಸೇರಿದಂತೆ ದೆಹಲಿ, ಮುಂಬೈ ಸೇರಿ ಹಲವು ನಗರಗಳಲ್ಲಿ ಆಸ್ತಿ ಸಂಪಾದನೆ, ಹಲವು ವರ್ಷಗಳಿಂದ ನಿರಂತರ ಆದಾಯ ಹೆಚ್ಚಳ ಆರೋಪದ ಮೇಲೆ ಈ ಹಿಂದೆ ಇಡಿ ದಾಳಿ ಆಗಿತ್ತು.
ದಾಖಲೆ ಸಂಗ್ರಹದ ಸಮಯದಲ್ಲಿ ಡಿಕೆಶಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಜಾಮೀನು ಪಡೆದು ಜೈಲಿನಿಂದ ಡಿಕೆಶಿ ಹೊರ ಬಂದಿದ್ದರು. ಈ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB