ಬೆಳಗಾವಿ: ಜಿಲ್ಲಾ ಪ್ರವಾಸಕ್ಕೆಂದು ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಲು ಜಿಲ್ಲೆಯ ಯಾವೊಬ್ಬ ಕಾಂಗ್ರೆಸ್ ಶಾಸಕನೂ ಆಗಮಿಸಿಲ್ಲ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಶಿವಕುಮಾರ್ ಅವರದ್ದು ಖಾಸಗಿ ಕಾರ್ಯಕ್ರಮವಾಗಿತ್ತು. ನಾನು ಜಿಲ್ಲೆಯಲ್ಲಿ ಇರುವುದಿಲ್ಲ ಎಂದು ಮೊದಲೇ ಹೇಳಿದ್ದೆ ಎಂದು ಅವರು ತಿಳಿಸಿದ್ದಾರೆ.
ಬಹಳ ಮಂದಿ ಪ್ರವಾಸಕ್ಕೆ ಹೋಗಿದ್ದರು. ಜಿಲ್ಲಾಧ್ಯಕ್ಷರು ಕೂಡ ಪ್ರವಾಸ ಹೋಗಿದ್ದರು. ಹೀಗಾಗಿ ಅದಕ್ಕೆ ವಿಶೇಷ ಕಲ್ಪನೆ ಅರ್ಥ ಕೊಡುವ ಅಗತ್ಯವಿಲ್ಲ ಎಂದು ಅವರು ಚರ್ಚೆಗೆ ತೆರೆ ಎಳೆದರು.


