ತುಮಕೂರು: ಬಿಜೆಪಿಯಿಂದ ದಲಿತ ಮುಖ್ಯಮಂತ್ರಿ ಎನ್ನುವ ಮಾತು ಅನಗತ್ಯ. ಸಮಾನತೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷ ದಲಿತರಿಗೆ ಸಿಎಂ ಪದವಿ ನೀಡುವ ಬಗ್ಗೆ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಮಾಜಿ ಡಿಸಿಎಂ, ಕಾಂಗ್ರೆಸ್ ನ ಹಿರಿಯ ನಾಯಕ ಜಿ.ಪರಮೇಶ್ವರ್ ಹೇಳಿದರು.
ಭಾನುವಾರ ನಡೆದ ಕಾಂಗ್ರೆಸ್ ಪರಾಮರ್ಶನಾ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯುವರು ರಾಜಕಾರಣದ ದೃಷ್ಠಿಯಿಂದ ದಲಿತ ಸಿಎಂ ಹೆಸರು ಪ್ರಸ್ತಾಪಿಸುತ್ತಿದ್ದಾರೆ. ಕಾಂಗ್ರೆಸ್ ದಲಿತ ನಾಯಕರಿಗೆ ಅವರ ಅರ್ಹತೆ ಆಧಾರದಲ್ಲಿ ಸಂದರ್ಭ ಒದಗಿ ಬಂದಾಗಲೆಲ್ಲ ಉನ್ನತ ಸ್ಥಾನ ಮಾನ ನೀಡಿದೆ. ಮಹಾರಾಷ್ಟ್ರದ ದಲಿತ ನೇತಾರ ಸುಶೀಲ್ ಶಿಂಧೆ ಅವರನ್ನು ರಾಜ್ಯಪಾಲರನ್ನಾಗಿಸಿದ್ದು ಕಾಂಗ್ರೆಸ್ ಎಂದರು.
ಮೇದಾವಿ ರಾಜನೀತಿಜ್ಞ ಕೆ.ಆರ್.ನಾರಾಯಣ್ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ಸಂವಿಧಾನಕ್ಕೆ ಅಪಮಾನಿಸುವಂತೆ ದಲಿತ ಸಮುದಾಯವನ್ನು ಅನಗತ್ಯವಾಗಿ ಎಳೆದು ತರುವುದು ಬೇಡ ಎಂದು ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700