ತಮಿಳುನಾಡಿನ ಡಿಎಂಕೆ ಪಕ್ಷದ ಮಧುರೈ ಮಂಡಲ ಅಧ್ಯಕ್ಷ, ರೌಡಿಶೀಟರ್ ವಿ. ಕೆ. ಗುರುಸ್ವಾಮಿ ಮೇಲೆ ಕಾರಿನಲ್ಲಿ ಬಂದ ಐವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಗುರುಸ್ವಾಮಿ ಅವರ ಸ್ಥಿತಿ ಗಂಭೀರವಾಗಿದ್ದು, ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗುರುಸ್ವಾಮಿ ಅವರು ಕರುಣಾನಿಧಿ ಅವರ ಪುತ್ರ ಅಳಗಿರಿ ಆಪ್ತ ಎನ್ನಲಾಗಿದೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮನಹಳ್ಳಿಯ ಸುಖಸಾಗರ್ ಹೋಟೆಲ್ ನಲ್ಲಿ ಹಲ್ಲೆ ನಡೆದಿತ್ತು.


