ತಮಿಳುನಾಡು: 2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದಿಂದ ಸ್ಪರ್ಧೆ ನಡೆಸಿ ಜಯ ಗಳಿಸಿದ್ದ ಗಣೇಶಮೂರ್ತಿ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ತಮಿಳುನಾಡಿನ ಈರೋಡ್ ಲೋಕಸಭಾ ಕ್ಷೇತ್ರದ ಸಂಸದ ಎ. ಗಣೇಶಮೂರ್ತಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅವರು ಕೀಟನಾಶಕ ಸೇವಿಸಿದ ಕಾರಣ ಆರೋಗ್ಯ ತೀರಾ ಹದಗೆಟ್ಟಿದೆ ಎನ್ನಲಾಗಿದೆ.
ಕೀಟನಾಶಕ ಸೇವಿಸಿದ್ದಾರೆ ಎನ್ನುವ ಮಾಹಿತಿ ಇದೀಗ ಲಭ್ಯವಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಕೃತಕ ಉಸಿರಾಟ ವ್ಯವಸ್ಥೆಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ.
ಎಂಡಿಎಂಕೆ ನಾಯಕ ದುರೈ ವೈಕೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಣೇಶಮೂರ್ತಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಇಸಿಎಂಒ ಚಿಕಿತ್ಸೆಯಲ್ಲಿದ್ದಾರೆ ಎಂದು ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296