ತುಮಕೂರು: ಹೆಗ್ಗೆರೆ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಸಾರ್ವಜನಿಕ ಸೇವೆ ಒದಗಿಸಲು ಯಾವುದೇ ಮಧ್ಯವರ್ತಿಗಳನ್ನು ನೇಮಕ ಮಾಡಿಕೊಂಡಿರುವುದಿಲ್ಲ. ಕೆಲವರು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಹಣ ನೀಡಬೇಕೆಂದು ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕರು ಪಂಚಾಯತಿಗೆ ಸಂಬಂಧಿಸಿದ ತಮ್ಮ ಕೆಲಸ–ಕಾರ್ಯಗಳಿಗಾಗಿ ಮಧ್ಯವರ್ತಿಗಳನ್ನು ಸಂಪರ್ಕಿಸದೆ ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿ ಅಧಿಕಾರಿಗಳನ್ನು ಭೇಟಿ ಮಾಡಬೇಕೆಂದು ಹೆಗ್ಗೆರೆ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಮನವಿ ಮಾಡಿದ್ದಾರೆ.
ಗ್ರಾಮ ಪಂಚಾಯತಿಯಲ್ಲಿ ದೊರೆಯುವ ಸಾರ್ವಜನಿಕ ಸೇವೆಗಾಗಿ ನಿಗದಿತ ಶುಲ್ಕವನ್ನು ಪಾವತಿಸಿ ರಸೀದಿ ಪಡೆಯಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಗಾಮ ಪಂಚಾಯತಿ ಸಿಬ್ಬಂದಿಗಳಾಗಲಿ ಅಥವಾ ಬೇರೆ ಯಾರಾದರೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಣ ನೀಡಬೇಕೆಂದು ಒತ್ತಾಯ ಮಾಡಿದಲ್ಲಿ ಹೆಗ್ಗೆರೆ ಗ್ರಾಮ ಪಂಚಾಯತಿ ಕಚೇರಿ ಅಥವಾ ಕರ್ನಾಟಕ ಲೋಕಾಯುಕ್ತ ಕಚೇರಿಗೆ ದೂರು ನೀಡಲು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx