ಬೆಂಗಳೂರು: ರಾಜ್ಯಾದ್ಯಂತ ದೀಪಾವಳಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಪಟಾಕಿ ಅವಘಡದಿಂದ ಹಲವರು ಗಾಯಗೊಂಡಿದ್ದಾರೆ.
ಪಟಾಕಿ ಕಿಡಿ ತಾಗಿ ಕಣ್ಣಿಗೆ ಗಾಯಮಾಡಿಕೊಂಡಿರುವ 29 ಜನರು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮಿಂಟೋ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 15 ಪ್ರಕರಣಗಳು ದಾಖಲಾಗಿವೆ. ಒಟ್ಟು 29 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 8 ಜನರಿಗೆ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ.
ವಯಸ್ಕರರು 9 ಜನರು, 9 ಮಕ್ಕಳು, ಅಕ್ಕಪಕ್ಕ ನಿಂತಿದ್ದವರಿಗೆ ಪಟಾಕಿ ಕಿಡಿ ತಗುಲಿ ಗಾಯಗೊಂಡ 8 ಜನ, ಸ್ವತಃ ಪಟಾಕಿ ಹಚ್ಚುವಾಗ ಕಣ್ಣಿಗೆ ಕಿಡಿ ತಗುಲಿ ಗಾಯಗೊಂಡ 7 ಜನರು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರಲ್ಲಿ ಇಬ್ಬರಿಗೆ ಸರ್ಜರಿ ಮಾಡಲಾಗಿದೆ. 15 ಜನರು ಗಂಭೀರವಾಗಿ ಗಾಯಗೊಂಡವರಿದ್ದು, 14 ಜನರು ಸಣ್ಣಪುಟ್ಟ ಗಾಯಗೊಂಡವರಾಗಿದ್ದಾರೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296