ರಾಜ್ಯದಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಜೂನ್ 11ರಿಂದ ಆರಂಭಗೊಂಡ ಯೋಜನೆಯಡಿ ಬರೋಬ್ಬರಿ 9,46, 35, 508 ಮಂದಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ.
ಶಕ್ತಿ ಯೋಜನೆ ಆರಂಭವಾದಂತ ಜೂನ್. 11ರಿಂದ ಇಲ್ಲಿಯವರೆಗೆ ಕೆಎಸ್ ಆರ್ ಟಿಸಿ ಬಸ್ಸುಗಳಲ್ಲಿ 2, 77, 78, 007, ಬಿಎಂಟಿಸಿ 3, 12, 41, 235, ವಾಕರಸಾ ಸಂಸ್ಥೆಯ ಬಸ್ಸುಗಳಲ್ಲಿ 2,29,36, 330 ಹಾಗೂ ಕೆಕೆ ಆರ್ ಟಿಸಿ ಬಸ್ಸುಗಳಲ್ಲಿ 1, 26, 79, 936 ಮಂದಿ ಮಹಿಳಾ ಪ್ರಯಾಣಿಕರು ಸೇರಿದಂತೆ ಒಟ್ಟು 9, 46, 35, 508 ಮಹಿಳೆಯರು ಉಚಿತವಾಗಿ ಸಂಚರಿಸಿದ್ದಾರೆ.
ಅಂದ ಹಾಗೇ ಈವರೆಗೆ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ರೂ. 222, 00, 79, 232 ಆಗಿದೆ ಎಂದು ಮಾಹಿತಿ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA