ನಟ ದರ್ಶನ್ ನಟನೆಯ ‘ಡೆವಿಲ್’ ಚಿತ್ರ ಿದೀಗ ಮತ್ತೆ ಶೂಟಿಂಗ್ ಆರಂಭಗೊಳ್ಳಲಿದೆ. ಮೈಸೂರಿನಲ್ಲಿ 4 ದಿನಗಳ ಕಾಲ ಚಿತ್ರೀಕರಣ ನಡೆಸಲು ಚಿತ್ರತಂಡ ಮುಂದಾಗಿದೆ.
ಮಾರ್ಚ್ 12ರಿಂದ 15ರವರೆಗೆ ಮೈಸೂರಿನಲ್ಲಿ ಶೂಟಿಂಗ್ ನಡೆಯಲಿದೆ. ಮಾ.12 ರಿಂದ ಮಾ.14 ರವರೆಗೆ ಸರ್ಕಾರಿ ಅಥಿತಿ ಗೃಹದಲ್ಲಿ ‘ಡೆವಿಲ್’ ತಂಡ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೂಟಿಂಗ್ ಮಾಡಲಿದೆ ಎನ್ನಲಾಗಿದೆ.
ಮಾ.15 ರಂದು ಲಲಿತಮಹಲ್ ಪ್ಯಾಲೆಸ್ನಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಚಿತ್ರೀಕರಣ ನಡೆಯಲಿದೆಯಂತೆ, ಅಂದ ಹಾಗೆ ಶೂಟಿಂಗ್ ನಡೆಸುವ ಸ್ಥಳದಲ್ಲಿ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಚಿತ್ರತಂಡ ಸುಮಾರು 1.64 ಲಕ್ಷ ರೂಪಾಯಿ ಪಾವತಿಸಿದೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4