ಎಚ್. ಡಿ. ಕೋಟೆ: ವಿಧಾನಸಭಾ ಕ್ಷೇತ್ರವು ಚಾಮರಾಜನಗರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದು, ಈ ಕ್ಷೇತ್ರದಲ್ಲಿ ಒಟ್ಟು 282 ಮತಗಟ್ಟೆಗಳಿವೆ ಎಂದು ಸಹಾಯಕ ಚುನಾವಣಾಧಿಕಾರಿ ಕುಮುದಾ ತಿಳಿಸಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಚ್.ಡಿ.ಕೋಟೆಯಲ್ಲಿ ಒಟ್ಟು 2 ಲಕ್ಷದ 27ಸಾವಿರದ 921 ಮತದಾರರಿದ್ದು, 1ಲಕ್ಷದ 13 ಸಾವಿರದ 769 ಪುರುಷರು, 1ಲಕ್ಷ 14 ಸಾವಿರದ 140 ಮಹಿಳೆಯರು , 3,433 ವಿಶೇಷ ಚೇತನರು ಹಾಗೂ 85 ವರ್ಷಕ್ಕೆ ಮೇಲ್ಪಟ್ಟವರು 3713 ಮತದಾರರಿದ್ದಾರೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಅಕ್ರಮಗಳನ್ನು ತಡೆಯಲು ಮೂರು ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಮತ್ತೆ ಹೊಸ ಮತದಾರರನ್ನ ಹಾಗೂ ಕಳೆದ ಸಾಲಿಗಿಂತಲೂ ಹೆಚ್ಚಿನ ಮತದಾನಕ್ಕಾಗಿ Ekhon ರೀತಿಯ ಜಾಗೃತಿ ಕಾರ್ಯಕ್ರಮ ಮಾಡಲಾಗುತ್ತಿದೆ. ವಿಶೇಷವಾಗಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ತಹಶೀಲ್ದಾರ ಶ್ರೀನಿವಾಸ್, ಪೋಲಿಸ್ ಉಪ ನಿರೀಕ್ಷಕ ಶಬೀರ್ ಹುಸೇನ್ ಹಾಜರಿದ್ದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296