ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ’ ಯೋಜನೆಗೆ ಇದುವರೆಗೂ ಒಂದು ಕೋಟಿ ಮಹಿಳೆಯರು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ರು.
ಜುಲೈ 19 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಬಳಿಕ ಜುಲೈ 20ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿತ್ತು. ಒಟ್ಟು 1. 28 ಕೋಟಿ ಫಲಾನುಭವಿಗಳಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡ 15 ದಿನಗಳಲ್ಲೇ ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಓನ್, ಬಾಪೂಜಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಮಹಿಳೆಯರು ಯಾವುದೇ ಶುಲ್ಕ ನೀಡದೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು.
ಕೇವಲ 15 ದಿನಗಳಲ್ಲಿ ಕೋಟಿಗೂ ಅಧಿಕ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಳ ಸಂಸತ ವ್ಯಕ್ತಪಡಿಸಿದ್ದಾರೆ. ಇದೇ ಆಗಸ್ಟ್ 16 ಅಥವಾ 20 ರಂದು ಬೆಳಗಾವಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2000 ರೂಪಾಯಿ ಜಮಾ ಮಾಡಲಾಗುವುದು ಎಂದು ಸಚಿವೆ ಹೆಬ್ಬಾಳಕರ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


