ಕೊಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು(ಆಗಸ್ಟ್ 17) ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಪ್ರತಿಭಟನೆಗೆ ಕರೆ ಕೊಟ್ಟಿದೆ. ಐಎಂಎ ಕೊಟ್ಟಿರುವ ಕರೆಗೆ ಸರ್ಕಾರಿ ವೈಧ್ಯಾದಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆ ಗಳ ಒಕ್ಕೂಟ ಮತ್ತು ಹಲವು ವೈದ್ಯಕೀಯ ಅಸೋಸಿಯೇಷನ್ಗಳು ಬೆಂಬಲ ಕೊಟ್ಟಿದ್ದು, ಶನಿವಾರ ಕರ್ನಾಟಕದಲ್ಲಿ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೂ ಆಸ್ಪತ್ರೆ ಓಪಿಡಿ ಬಂದ್ ಆಗಲಿದೆ.
ಅಂದರೆ 24 ಗಂಟೆಗಳ ಕಾಲ ಓಪಿಡಿ ಸೇವೆ ಸ್ಥಗಿತವಾಗಲಿದೆ. ಇದರಿಂದ ಮಕ್ಕಳು, ವಯಸ್ಸಾದವರಿಗೂ ಓಪಿಡಿ ಸೇವೆ ಇರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಿಬೇಕಾಗಿದೆ. ಮುಷ್ಕರಕ್ಕೆ ಯಾರೆಲ್ಲ ಬೆಂಬಲ..!
IMA ವ್ಯಾಪ್ತಿಯ ವೈದ್ಯರ ಬೆಂಬಲ
ಫನಾ ಬೆಂಬಲ ಖಾಸಗಿ ಆಸ್ಪತ್ರೆಗಳ ಒಕ್ಕೂಟ
ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಷನ್
ಮಕ್ಕಳ ವೈದ್ಯರ ಅಸೋಸಿಯೇಷನ್
ಅರ್ಥೋಪಿಟಿಕ್ ಅಸೋಸಿಯೇಷನ್
ಮೆಡಿಕಲ್ ಕಾಲೇಜ್ ವೈದ್ಯರ ಅಸೋಸಿಯೇಷನ್
ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ
ಕೊಲ್ಕತ್ತಾದ ಮೃತ ವೈದ್ಯೆಯ ಸಾವಿಗೆ ನ್ಯಾಯ ಒದಗಿಸಬೇಕು. ಹಿಂಸಾಚಾರದ ವಿರುದ್ಧ ವೈದ್ಯರಿಗೆ ರಕ್ಷಣೆ ಒದಗಿಸಬೇಕು. ಆಸ್ಪತ್ರೆಗಳನ್ನು ಸೇಫ್ ಝೋನ್ ಎಂದು ಘೋಷಿಸಲು IMA ಆಗ್ರಹಿಸಿದೆ. ಫೆಡರೇಷನ್ ಆಫ್ ರೆಸಿಡೆಂಟ್ ಡಾಕ್ಟರ್ ಅಸೋಸಿಯೇಷನ್ ಈಗಾಗಲೇ ತೀವ್ರ ಹೋರಾಟ ನಡೆಸುತ್ತಿದ್ದು, ಬಂದ್ ಮುಂದುವರಿಸಲು ತೀರ್ಮಾನಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q