ಆರು ವರ್ಷದ ಬಾಲಕಿಯ ಮೇಲೆ ನಾಯಿವೊಂದು ಅಟ್ಯಾಕ್ ಮಾಡಿರೋ ಶಾಕಿಂಗ್ ಘಟನೆ ಘಾಜಿಯಾಬಾದ್ನ ಹೌಸಿಂಗ್ ಸೊಸೈಟಿಯಲ್ಲಿ ನಡೆದಿದೆ. ನಾಯಿ ಏಕಾಏಕಿ ಬಾಲಕಿ ಮೇಲೆ ಅಟ್ಯಾಕ್ ಮಾಡುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಶ್ವಾನದ ಮಾಲೀಕರ ಮೇಲೆ ಆಕ್ರೋಶ ಹೊರ ಹಾಕುತ್ತಿದ್ದಾರೆ.
ವನ್ಯಾ ಚೌಹಾನ್ ಎಂಬ ಬಾಲಕಿ ಸೈಕಲ್‌ನಲ್ಲಿ ಹೋಗುತ್ತಿದ್ದಳು. ಇದೇ ವೇಳೆ ಜರ್ಮನ್ ಶೆಫರ್ಡ್ ತಳಿಯ ಶ್ವಾನ ಏಕಾಏಕಿ ಬಾಲಕಿಯ ಮೇಲೆ ದಾಳಿ ಮಾಡಿದೆ. ಕೂಡಲೇ ಅಲ್ಲೇ ನಿಂತಿದ್ದ ಬಾಲಕಿ ತಾಯಿ ನಮಿತಾ ಚೌಹಾಣ್ ಆಕೆಯ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಶ್ವಾನದಿಂದ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ ಶ್ವಾನ ಬಾಲಕಿಯ ಮೇಲೆ ದಾಳಿ ಮಾಡುತ್ತಿದ್ದಾಗ ಅದನ್ನು ನಿಯಂತ್ರಿಸಲು ಮಾಲೀಕರು ಹರಸಾಹಸ ಪಡುವಂತ ಸ್ಥಿತಿ ನಿರ್ಮಾಣಗೊಂಡಿತ್ತು. ಸದ್ಯ ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ನಾಯಿ ದಾಳಿಗೆ ಒಳಗಾದ ಬಾಲಕಿಗೆ ಕೈಗೆ ಹಾಗೂ ಸೊಂಟದ ಭಾಗದಲ್ಲಿ ಗಾಯಗಳಾಗಿವೆ. ಕೂಡಲೇ ಬಾಲಕಿ ತಾಯಿ ಆಕೆಯನ್ನು ಆಸ್ಪತ್ರೆಗೆ ಕಡೆದುಕೊಂಡು ಹೋಗಿದ್ದಾರೆ. ಜೊತೆಗೆ ಬಾಲಕಿಯ ತಾಯಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 289ರ ಅಡಿಯಲ್ಲಿ ನಾಯಿಯ ಮಾಲೀಕರ ವಿರುದ್ಧ ದೂರು ದಾಖಲಿಸಿದ್ದಾರೆ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ರವಿಕುಮಾರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA