ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯಗೆ ಭೇಟಿ ನೀಡಿದ್ದ ವೇಳೆ ರೌಡಿಶೀಟರ್ ಗೆ ಕೈಮುಗಿದು ನಮಸ್ಕರಿಸಿದ್ದು ಭಾರಿ ಟೀಕೆಗೆ ಗುರಿಯಾಗಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಡಾನ್ ಕ್ರಿಕೆಟ್ ಬೆಟ್ಟಿಂಗ್ ನಡೆಸುವವನಿಗೆ ಪ್ರಧಾನಿ ಮೋದಿ ತಲೆ ಬಾಗಿದ್ದಾರೆ ಇದು ನಾಚಿಕೆಗೇಡಿನ ಸಂಗತಿ. ಈ ದೃಶ್ಯ ನೋಡಿದ್ರೆ ಬಿಜೆಪಿಯವರ ಸ್ಥಿತಿ ಗೊತ್ತಾಗುತ್ತೆ ಎಂದು ಟೀಕಿಸಿದರು.
ಪ್ರಧಾನಿ ಮೋದಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟಿಸಿ ಹೋಗಿದ್ದಾರೆ. ಆದರೆ, ಮೋದಿ ಓರ್ವ ರೌಡಿ ಶೀಟರ್ಗೆ ಕೈಮುಗಿದಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮೋದಿ ಮಂಡ್ಯ ಹೆಲಿಪ್ಯಾಡ್ ಗೆ ಬಂದಿಳಿದ ವೇಳೆ ಬಿಜೆಪಿ ಮುಖಂಡರು ಸ್ವಾಗತಕೋರಿದ್ದರು.
ಈ ವೇಳೆ ಬಿಜೆಪಿ ಮುಖಂಡರ ಜೊತೆ ರೌಡಿ ಶೀಟರ್ ಫೈಟರ್ ರವಿ ಸಹ ಕಾಣಿಸಿಕೊಂಡಿದ್ದು, ಮೋದಿಗೆ ಕೈ ಮುಗಿದು ಸ್ವಾಗತ ಕೋರಿದ್ದಾರೆ. ಇದಕ್ಕೆ ಮೋದಿ ಸಹ ಫೈಟರ್ ರವಿ ಎದುರು ಕೈ ಮುಗಿದು ನಿಂತಿದ್ದು, ಇದೀಗ ಬಾರಿ ಟೀಕೆಗೆ ಕುರಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


