ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರವನ್ನು ಹತೋಟಿಗೆ ತರಲು ತಾಲೂಕಿನ ವರದಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ನಿಯಂತ್ರಣ ಕ್ರಮಗಳನ್ನು ಸಮರೋಪಾದಿಯಲ್ಲಿ ತೆಗೆದುಕೊಳ್ಳಲಾಗುತ್ತಿದೆ, ಜನರು ಆತಂಕಕ್ಕೊಳಗಾಗದೇ ಆರೋಗ್ಯ ಇಲಾಖೆಯ ಮಾರ್ಗಸೂಚಿ ಪಾಲಿಸುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮನವಿ ಮಾಡಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರ ಸೋಂಕು ನಿಯಂತ್ರಿಸುವ ಮೂಲಕ ರೋಗ ಬೇರೆಡೆಗೆ ಹರಡದಂತೆ ಹಲವು ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಈಗಾಗಲೇ ವರದಹಳ್ಳಿಯಲ್ಲಿ ಸಾವನ್ನಪ್ಪಿದ ಕೋಳಿಗಳಲ್ಲಿ ಹಕ್ಕಿಜ್ವರದ ಸೋಂಕು ಪತ್ತೆಯಾಗಿ ದೃಢಪಟ್ಟಿರುವ ಕಾರಣ ಈ ಗ್ರಾಮವನ್ನು ಕೇಂದ್ರವಾಗಿಸಿಕೊಂಡು ಸುತ್ತಲೂ 10 ಕಿಮೀ ವ್ಯಾಪ್ತಿಯಲ್ಲಿ ಕೋಳಿ ಸಾಗಾಣಿಕೆ ಮೇಲೆ ನಿರ್ಬಂಧ ಹೇರಲಾಗಿದೆ. ಅಲ್ಲದೆ, ಹೊರಗಡೆಯಿಂದ ವರದಹಳ್ಳಿ ಸುತ್ತಮುತ್ತಲ ಗ್ರಾಮಗಳಿಗೆ ಕೋಳಿಗಳನ್ನು ತರದಂತೆ ನಾಕಾಬಂದಿ ಹಾಕಲಾಗಿದೆ ಎಂದು ತಿಳಿಸಿದರು.
ಕೋಳಿಗಳನ್ನು ಪಡೆಯುವ ಪ್ರಕ್ರಿಯೆ ಆರಂಭವಾಗಿದೆ. ಇದುವರೆಗೆ ಗ್ರಾಮದ ಜನರಲ್ಲಿ ಯಾವುದೇ ಕೆಮ್ಮು,ಶೀತ ನೆಗಡಿ, ಜ್ವರದಂತಹ ಪ್ರಕರಣಗಳು ಕಂಡುಬಂದಿಲ್ಲ. ಆದರೂ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಪ್ರತಿ ಕುಟುಂಬದ ಆರೋಗ್ಯದ ಮೇಲೂ ನಿಗಾ ಇಡಲಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4