nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    ಮಧುಗಿರಿ August 13, 2026

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    By adminAugust 13, 2026No Comments2 Mins Read
    k n rajanna.jpg

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ ನಾನು ನಿಮ್ಮ ಜೊತೆ ಇರುತ್ತೇವೆ ಎಂದು ಶಾಸಕ ಕೆ.ಎನ್.ರಾಜಣ್ಣ ಜನತೆಗೆ ಭರವಸೆ ನೀಡಿದರು.
    ಅವರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ಪಶು ಇಲಾಖೆ ವತಿಯಿಂದ 94 ರಾಸುಗಳ ನೆಲ ಹುಲ್ಲು, 6 ರಾಸುಗಳ ಹಾಲು ಕರೆಯುವ ಯಂತ್ರ, 26 ವಲಸೆ ಕುರಿಗಾರರಿಗೆ ಗುರುತಿನ ಚೀಟಿ ಹಾಗೂ ಮೇವು ಬೀಜಗಳ ಕಿಟ್ ವಿತರಿಸಿ ಮಾತನಾಡಿದರು.

    ಹತ್ತು ವರ್ಷಗಳ ಹಿಂದೆ ಇದೇ ರೀತಿಯ ವಾತಾವರಣ ಸೃಷ್ಟಿಯಾಗಿತ್ತು. ಅಂದೂ ಸಹ ಗೋ ಶಾಲೆ ಆರಂಭಿಸಿ ಗೋಪಾಲಕರಿಗೆ ಉಚಿತ ಊಟದ ವ್ಯವಸ್ಥೆ ಹಾಗೂ ಮೇವಿನ ಬೀಜಗಳ ಕಿಟ್ ವಿತರಿಸಲಾಗಿತ್ತು. ಇಂದು ಮನುಷ್ಯನಿಗೆ ಅನ್ನದ ಅಭಾವವಿಲ್ಲದಂತೆ ಮಾಡಿರುವ ವ್ಯಕ್ತಿ ಎಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಆದರೆ ಅಗತ್ಯವಿರುವುದು ರಾಸುಗಳಿಗೆ ಮೇವು. ಇದರ ಕೊರತೆಯಾಗದಂತೆ ಮೇವು ಬೀಜಗಳನ್ನು ವಿತರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತಮ ಗುಣಮಟ್ಟದ ಕುಡಿಯುವ ನೀರು ದೊರೆಯಲಿದೆ. ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬರಗಾಲವನ್ನು ಎದುರಿಸಲು ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಪಟ್ಟಣದಲ್ಲಿ ನಡೆಸಿದ ಸಭೆಯಲ್ಲಿ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ ಎಂದರು.

    ರೈತರು ತಾವುಗಳು ಬೆಳೆದಂತಹ ಮೇವನ್ನು ತಮ್ಮ ರಾಸುಗಳಿಗೆ ಅಗತ್ಯವಿರುವಷ್ಟು ತಮ್ಮ ಬಳಿಯೇ ಉಳಿಸಿಕೊಂಡು ಉಳಿದ ಹೆಚ್ಚುವರಿ ಮೇವನ್ನು ಸರ್ಕಾರಕ್ಕೆ ಮಾರಾಟ ಮಾಡಬಹುದಾಗಿದೆ. ದೊಡ್ಡೇರಿ ಹಾಗೂ ಕೊಡಿಗೇನಹಳ್ಳಿ ಹೋಬಳಿಗಳಲ್ಲಿ ಮೇವಿನ ಕೊರತೆ ಇದೆ ಎಂದು ತಿಳಿದು ಬಂದಿದೆ. ತಾಲೂಕಿಗೆ ಇನ್ನೂ 20 ಸಾವಿರ ಕಿಟ್ಗಳು ಬರಲಿವೆ. ರೈತರು ಮೇವು ಬೆಳೆಯಲು ಆಸಕ್ತಿ ಇರುವವರಿಗೆ ಮಾತ್ರ ಕಿಟ್ಗಳನ್ನು ವಿತರಣೆ ಮಾಡಬೇಕು. ತಕ್ಷಣ ಮೇವು ಬೀಜಗಳನ್ನು ವಿತರಣೆ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಹಾಗೂ ರೈತರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ಸೃಷ್ಟಿಯಾಗಬೇಕು ಎಂದರು.

    ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಮಾತನಾಡಿ, ರಾಸುಗಳ ಮೇವಿಗೆ ತೊಂದರೆಯಾಗದಂತೆ ಎರಡೇ ದಿನದಲ್ಲಿ 10 ಸಾವಿರ ಮೇವು ಬೀಜಗಳನ್ನು ಪಶು ಇಲಾಖೆಯ ವತಿಯಿಂದ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ನಮ್ಮಲ್ಲಿ 14 ವಾರಗಳಿಗೆ ಆಗುವಷ್ಟು ಮೇವು ಇದ್ದರೂ ಸಹ ಮುಂದಾಲೋಚನೆಯಿಂದ ಮತ್ತಷ್ಟು ಮೇವು ಬೀಜಗಳನ್ನು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿನ ರೈತರು ಹೈನುಗಾರಿಕೆಯನ್ನು ಹೆಚ್ಚು ಅವಲಂಬಿತರಾಗಿರುವುದರಿಂದ ರಾಸುಗಳ ಮೇವಿನ ಅಗತ್ಯತೆ ಹೆಚ್ಚಿದೆ. ನೀರಿನ ಸೌಲಭ್ಯ ಇರುವವರು ಮೇವು ಬೀಜಗಳನ್ನು ಬಿತ್ತಿ ಬೆಳೆದು ರಾಸುಗಳ ಮೇವಿನ ಕೊರತೆಯನ್ನು ನೀಗಿಸಬಹುದಾಗಿದೆ ಎಂದರು.

    ಎಸಿ.ಎಸ್.ಮಲ್ಲಿಕಾರ್ಜುನಯ್ಯ, ಪಶು ಇಲಾಖೆಯ ಉಪನಿರ್ದೇಶಕ ಶಿವಪ್ರಸಾದ್ ಹೆಚ್.ಎಂ, ಸಹಾಯಕ ನಿರ್ದೇಶಕ ಡಾ. ಜಗದೀಶ್ ಎಸ್.ಕೆ, ತಹಸೀಲ್ದಾರ್ ನಂದಿನಿ, ಇ.ಓ. ಉತ್ತಮ್, ಮುಖಂಡರುಗಳಾದ ಬಿ.ನಾಗೇಶ್ ಬಾಬು, ಪಿ.ಟಿ.ಗೋವಿಂದಯ್ಯ, ಎಂ.ಕೆ.ನಂಜುಂಡರಾಜು, ಶ್ರೀಧರ್, ಸಾಧಿಕ್, ಅಲೀಂ, ತುಂಗೋಟಿ ರಾಮಣ್ಣ, ಪಶು ವೈದ್ಯಾಧಿಕಾರಿಗಳು, ಸಿಬ್ಬಂದಿ, ಫಲಾನುಭವಿಗಳು ಇದ್ದರು.

    ಬರಗಾಲದ ಭೀತಿಯಿಂದ ಯಾರೂ ಹೆದರುವ ಅಗತ್ಯತೆ ಇಲ್ಲ. ನನಗೆ ಮಳೆ ಬರುವ ವಿಶ್ವಾಸವಿದೆ. ನಮ್ಮಲ್ಲಿ ಹಣದ ಕೊರತೆ ಇಲ್ಲ. ಅಗತ್ಯವಿರುವೆಡೆ ಕುಡಿಯುವ ನೀರಿಗಾಗಿ ಪೈಪ್ ಲೈನ್ ಹಾಗೂ ಬೋರ್ ವೆಲ್ ವ್ಯವಸ್ಥೆ ಕಲ್ಪಿಸಿ ಕೊಡಲಾಗುವುದು. ನಮ್ಮಲ್ಲಿ ಇನ್ನೂ 14 ವಾರಗಳಿಗೆ ದೊರೆಯಬಹುದಾದ ಮೇವು ಇದೆ. ನಮ್ಮ ತಾಲೂಕಿನಲ್ಲಿ ಹೆಚ್ಚು ಚೆಕ್ ಡ್ಯಾಂಗಳನ್ನು ನಿರ್ಮಿಸಿರುವುದರಿಂದ ಅಂತರ್ಜಲ ಮಟ್ಟ ಪ್ರಮಾಣ ಹೆಚ್ಚಿದೆ. ಗ್ರಾ.ಪಂ ಮಟ್ಟದಲ್ಲಿ ಎಂ ಜಿ ನರೇ ಗ ಯೋಜನೆಯಡಿ ಮತ್ತಷ್ಟು ಚೆಕ್ ಡ್ಯಾಂ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇವುಗಳ ನಿರ್ಮಾಣದಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗುವುದಿಲ್ಲ.

    — ಕೆ.ಎನ್.ರಾಜಣ್ಣ, ಶಾಸಕರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    admin
    • Website

    Related Posts

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026

    ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ

    September 4, 2026

    ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!

    September 4, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    ತಿಪಟೂರು: ನಗರದ ವಿವಿಧ ಹೋಟೆಲ್‌ ಗಳು, ಡಾಬಾಗಳು ಮತ್ತು ಬೇಕರಿಗಳ ಮೇಲೆ ನಗರಸಭೆ ಅಧಿಕಾರಿಗಳು ಹಾಗೂ ತಾಲೂಕು ವೈದ್ಯಾಧಿಕಾರಿಗಳು ಜಂಟಿ…

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.