ಬೆಂಗಳೂರು: ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಂಜಿತಾ (27) ಮೃತ ದುರ್ದೈವಿ.
ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ರಂಜಿತಾ ವೃತ್ತಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದರೆ, ಪತಿ ಮಧು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ಮದುವೆಯಾದಗಿನಿಂದಲೂ ಮಧು ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ವರದಕ್ಷಿಣೆ ನೀಡಿಲ್ಲವೆಂದು ನಮ್ಮ ಮಗಳನ್ನು ಕೊಲೆ ಮಾಡಿದ್ದಾರೆಂದು ರಂಜಿತಾ ಪೋಷಕರು ಆರೋಪ ಮಾಡಿದ್ದಾರೆ. ವರದಕ್ಷಿಣೆ ಕಿರುಕುಳದ ಬಗ್ಗೆ ರಂಜಿತಾ ಆಗಾಗ ತಾಯಿ ಬಳಿ ಹೇಳಿದ್ದರು. ಅಲ್ಲದೆ ರಂಜಿತಾ ಸಾವಿಗೂ ಮುನ್ನ ತಾಯಿಗೆ ವಿಡಿಯೋ ಕಾಲ್ ಮಾಡಿದ್ದರು. ಬಳಿಕ ರಂಜಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜ್ಞಾನಭಾರತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


