ಡಾ. ರಾಜ್ ಕುಮಾರ್ ಅವರ ಕುಟುಂಬದ ಕುಡಿ ಗುರು ರಾಜ್ ಕುಮಾರ್ / ಯುವ ರಾಜ್ ಕುಮಾರ್ ಅವರ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ಯುವ ರಾಜ್ ಕುಮಾರ್ ಅವರು ತಮ್ಮ ಪತ್ನಿಯಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಡಾ ರಾಜ್ ಕುಮಾರ್ ಅವರ ಮೊಮ್ಮಗ ಯುವರಾಜ್ ಕುಮಾರ್ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದು, ಕಳೆದ 6 ತಿಂಗಳಿನಿಂದ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ.
ಜೂ. 6 ರಂದು ವಿಚ್ಛೇದನಕ್ಕಾಗಿ ಯುವ ರಾಜ್ ಕುಮಾರ್ ಅವರು ತಮ್ಮ ಪತ್ನಿ ಶ್ರೀದೇವಿ ಭೈರಪ್ಪ ಅವರಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಜು. 4 ಕ್ಕೆ ವಿಚಾರಣೆ ನಿಗದಿ ಮಾಡಿದೆ.
ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಎರಡೂ ಕುಟುಂಬಗಳ ಒಪ್ಪಿಗೆ ಪಡೆದು ಈ ಜೋಡಿ ಹಸೆಮಣೆ ಏರಿದ್ದರು. ಅಲ್ಲದೇ, ಶ್ರೀದೇವಿ ಭೈರಪ್ಪ ಡಾ. ರಾಜ್‌ಕುಮಾರ್ ಸಿವಿಲ್ ಅಕಾಡೆಮಿಯ ಜವಾಬ್ದಾರಿಯನ್ನು ಸಹ ವಹಿಸಿಕೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


