ಬಳ್ಳಾರಿ: ಸಮಾಜದಲ್ಲಿ ಮಹಿಳೆಯರಿಗಿರುವ ಹಲವು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಬೆಂಗಳೂರಿನ ಒಂದೆಡೆ ಸಂಸ್ಥೆಯ ಸಂಸ್ಥಾಪಕರಾದ ಡಾ.ಅಕ್ಕೈ ಪದ್ಮಶಾಲಿ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ವಿಶ್ವವಿದ್ಯಾಲಯದ ಇಂಗ್ಲೀಷ್ ಅಧ್ಯಯನ ವಿಭಾಗ, ಯುಜಿ ಇಂಗ್ಲೀಷ್ ಶಿಕ್ಷಕರ ಸಂಘ ಹಾಗೂ ಇಂಗ್ಲೀಷ್ ಹಳೆಯ ವಿದ್ಯಾರ್ಥಿಗಳು ಜಂಟಿಯಾಗಿ ಶುಕ್ರವಾರ ಆಯೋಜಿಸಲಾಗಿದ್ದ ‘ಬಾಡಿ ಆ್ಯಂಡ್ ಲಿಟ್ ರೆಚರ್’ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ದೇವದಾಸಿಯರು, ದಲಿತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಸ್ವಾವಲಂಬಿ ಜೀವನ ನಡೆಸುವಂತರಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಸಮಾಜದಲ್ಲಿ ವ್ಯಕ್ತಿ ಗೌರವ, ಹಕ್ಕು ಸ್ವಾತಂತ್ರ್ಯವನ್ನು ಕಾಪಾಡುವುದು ಮುಖ್ಯವಾಗಿದೆ. ಹಲವಾರು ನೈತಿಕ ವಿಚಾರಗಳ ಕುರಿತು ವಿದ್ಯಾರ್ಥಿಗಳು, ಸಂಶೋಧಕರು ಗಂಭೀರವಾಗಿ ಚಿಂತನೆ ನಡೆಸಿ, ಸಮಾಜದ ಪರಿವರ್ತನೆಗೆ ಮುಂದಾಗಬೇಕು ಎಂದು ಹೇಳಿದರು.
ವಿವಿಯ ಕುಲಸಚಿವ ಪ್ರೊ.ವಿ.ಲೋಕೇಶ್, ಕಲಾ ನಿಕಾಯದ ಡೀನರಾದ ಪ್ರೊ.ರಾಬರ್ಟ್ ಜೋಸ್, ಯುಜಿ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಬಸವರಾಜ್ ಟಿ.ಎಚ್ ವೇದಿಕೆಯಲ್ಲಿದ್ದರು.
ಇಂಗ್ಲೀಷ್ ಅಧ್ಯಯನ ವಿಭಾಗದ ಡಾ.ಸಂತೋಷ ಜಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ನಿಹಾರಿಕಾ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ.ವಾತ್ಸಲ್ಯ ಆರ್. ವಂದಿಸಿದರು.
ವಿವಿಧ ಕಾಲೇಜುಗಳ ಇಂಗ್ಲೀಷ್ ಪ್ರಾಧ್ಯಾಪಕರು ಸೇರಿದಂತೆ 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು. ಕನ್ನಡ, ಇಂಗ್ಲೀಷ್ ಮತ್ತು ನಾಟಕ ಹಾಗೂ ಪ್ರದರ್ಶನ ಕಲೆ ಅಧ್ಯಯನ ವಿಭಾಗದ ಎಲ್ಲ ಬೋಧಕ -ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


