nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    ಜಿಲ್ಲಾ ಸುದ್ದಿ April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    By adminApril 15, 2026No Comments6 Mins Read
    santhosh lad

    ಧಾರವಾಡ: ಡಾ.ಬಿ.ಆರ್.ಅಂಬೇಡ್ಕರ್ ಅವರು  ಸಂವಿಧಾನ ರಚನೆ ಮೂಲಕ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ ಹಾಕಿಕೊಟ್ಟವರು ಹಾಗೂ ಅವರು ಎದುರಿಸಿದ ಕಷ್ಟಗಳು ಅಪಾರವಾಗಿದ್ದು, ಸಮಾಜದ ಅನ್ಯಾಯ ಮತ್ತು ಅಸಮಾನತೆ ನಡುವೆಯೇ ಅವರು ಉನ್ನತ ಶಿಕ್ಷಣ ಪಡೆದು, ಹಲವು ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಭಾರತದ ಸಂವಿಧಾನವನ್ನು ರಚಿಸಿದ್ದಾರೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಅವರು ಹೇಳಿದರು.

    ಅವರು ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಂಯುಕ್ತವಾಗಿ ಆಯೋಜಿಸಿದ್ದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 135 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

    ಸಂವಿಧಾನವನ್ನು ರಚಿಸಲು ಸುಮಾರು 2 ವರ್ಷ 11 ತಿಂಗಳು 18 ದಿನಗಳ ಕಾಲ ನಿರಂತರ ಚರ್ಚೆ ನಡೆಸಿ ಈ ಮಹತ್ವದ ಗ್ರಂಥವನ್ನು ರೂಪಿಸಲಾಗಿದೆ. ಭಾರತದಲ್ಲಿ ಹಿಂದಿನಿಂದಲೂ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆ ಇದ್ದ ಸಂದರ್ಭದಲ್ಲಿ, ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಅಂಬೇಡ್ಕರ್ ಅವರು ಹೋರಾಡಿ, ಎಲ್ಲ ವರ್ಗಗಳಿಗೂ ಸಮಾನ ಹಕ್ಕುಗಳನ್ನು ಒದಗಿಸುವ ವ್ಯವಸ್ಥೆಯನ್ನು ನಿರ್ಮಿಸಿದರು. ಸಂವಿಧಾನವು ಕೇವಲ ಒಂದು ವರ್ಗಕ್ಕೆ ಸೀಮಿತವಲ್ಲದೆ, ಎಲ್ಲಾ ನಾಗರಿಕರ ಹಿತಕ್ಕಾಗಿ ರೂಪಿತವಾಗಿದೆ ಎಂದು ಅವರು ಹೇಳಿದರು.

    ಮೀಸಲಾತಿ ವ್ಯವಸ್ಥೆಯು ಸಾಮಾಜಿಕ ನ್ಯಾಯ ಸಾಧಿಸಲು ಅಗತ್ಯವಾಗಿದ್ದು, ಇದು ಭಾರತದಲ್ಲಿ ಅಲ್ಲದೆ ಅನೇಕ ದೇಶಗಳಲ್ಲಿ ವಿವಿಧ ರೂಪಗಳಲ್ಲಿ ಜಾರಿಯಲ್ಲಿದೆ. ಸಮಾಜದಲ್ಲಿ ಹಿಂದುಳಿದ ವರ್ಗಗಳಿಗೆ ಅವಕಾಶ ಕಲ್ಪಿಸುವುದು ಇದರ ಮುಖ್ಯ ಉದ್ದೇಶ ಎಂದು ಅವರು ಹೇಳಿದರು.

    ಹೆಣ್ಣುಮಕ್ಕಳ ಹಕ್ಕುಗಳ ವಿಷಯದಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ. ಮಹಿಳೆಯರಿಗೆ ಆಸ್ತಿ ಹಕ್ಕು, ಮರು ವಿವಾಹ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡುವಲ್ಲಿ ಅವರ ಪಾತ್ರವನ್ನು ಸ್ಮರಿಸಬೇಕಾಗಿದೆ ಎಂದು ಸವಮಚಿವ ಸಂತೋಷ ಲಾಡ್ ಅವರು ತಿಳಿಸಿದರು.

    ಇಂದಿನ ಯುವಕರು ಅಂಬೇಡ್ಕರ್ ಅವರ ವಿಚಾರಗಳನ್ನು ಸರಿಯಾಗಿ ಅರಿತುಕೊಂಡು, ಸಂವಿಧಾನದ ಮೌಲ್ಯಗಳನ್ನು ಸಮಾಜದಲ್ಲಿ ಪ್ರಚಾರ ಮಾಡುವ ಜವಾಬ್ದಾರಿ ಹೊತ್ತುಕೊಳ್ಳಬೇಕು. ಸಮಾನತೆ, ನ್ಯಾಯ ಮತ್ತು ಸಹಬಾಳ್ವೆಯ ಆಶಯಗಳನ್ನು ಅಳವಡಿಸಿಕೊಂಡಾಗ ಮಾತ್ರ ದೇಶದಲ್ಲಿ ಸಾಮರಸ್ಯ, ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

    ನಮ್ಮಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ 3000 ವರ್ಷ ಹಿಂದಗಡೆ ನೋಡಿಕೊಂಡು ಬಂದಾಗ ನಾವು ವರ್ಣಗಳಲ್ಲಿ ಬದುಕುತ್ತಾ ಇದ್ವಿ. ಆ ನಾಲ್ಕು ವರ್ಣಗಳಲ್ಲಿ ಅಸ್ಪೃಶ್ಯತೆಯ ಜನಗಳು ಇರಲಿಲ್ಲಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸುಮಾರು ಇಂತಹ ಶೋಷಿತ ವರ್ಗಗಳ, ದಮನೀತ ವರ್ಗಗಳ ಹಕ್ಕಿಗಾಗಿ ಈ ದೇಶದ ವ್ಯವಸ್ಥೆಗಾಗಿ ಸಂವಿಧಾನ ಬರೆದಿದ್ದಾರೆ ಎಂದು ಅವರು ಹೇಳಿದರು.

    ದೇಶದ ಸಂವಿಧಾನ ಪೂರ್ವದಲ್ಲಿ ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಆಗಲಿ, ಗಂಡನ ಆಸ್ತಿ ಆಗಲಿ, ಹಕ್ಕು ಇರಲಿಲ್ಲ. ಭಾರತ ದೇಶದಲ್ಲಿ ಇರತಕ್ಕಂತಹ ಪ್ರತಿಯೊಬ್ಬ ಹೆಣ್ಣುಮಕ್ಕಳಿಗೆ ಇವತ್ತು ಗಂಡನ ಆಸ್ತಿ ಅಥವಾಪಿತ್ರಾರ್ಜಿತ ಆಸ್ತಿಯಲ್ಲಿ ಹಕ್ಕು ಸಿಗಬೇಕಾಗಿದ್ರೆ, ಬೇರೆ ಯಾರು ಮಾಡಿಲ್ಲ, ಮಾಡಿದ್ದರೆ ಅದು ಬಾಬಾಸಾಹೇಬ್ ಅಂಬೇಡ್ಕರ್ ಮಾಡಿದ್ದಾರೆ ಎಂಬುವುದನ್ನು ಯಾರು ಮರೆಯಬಾರದು. ಇವತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರ, ಈ ದೇಶದಲ್ಲಿ ಸಂವಿಧಾನ ಉಳಿಬೇಕಾಗಿದ್ರೆ ನಾವೆಲ್ಲರೂ ಇದನ್ನ ಅರ್ಥ ಮಾಡ್ಕೋಬೇಕು. ಇದನ್ನ ಉಳಿಸಬೇಕು. ಅದಕ್ಕೆ ನೀವು ಜಾಗೃತರಾಗಬೇಕು. ಸಮಾಜದಲ್ಲಿ ಬದಲಾವಣೆ ತರಬೇಕು. ಅಂಬೇಡ್ಕರ್ ವಾದಗಳು, ವಿಚಾರಗಳು, ಉಳಿಬೇಕು.  ಅದನ್ನ ಪಾಲಿಸಬೇಕು. ಗಟ್ಟಿಯಾಗಿ ಬೆಳೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಅವರು ಹೇಳಿದರು.

    ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದ, ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯ ಸ್ಥಾಪನೆಗೆ ಯುವ ಸಮೂಹ ಹಕ್ಕುಗಳ ಜೊತೆಗೆ ಜವಾಬ್ದಾರಿಗಳನ್ನೂ ಅರಿತುಕೊಳ್ಳಬೇಕೆಂದು ಮತ್ತು ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವುದμÉ್ಟೀ ಸಾಕಾಗುವುದಿಲ್ಲ, ಆ ಹಕ್ಕುಗಳೊಂದಿಗೆ ಬಂದಿರುವ ಜವಾಬ್ದಾರಿಗಳನ್ನು ಸಹ ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.

    ಪ್ರಜಾಸತ್ತಾತ್ಮಕ ವ್ಯವಸ್ಥೆ ಕೇವಲ ಚುನಾವಣೆಗಳಿಗೆ ಸೀಮಿತವಾಗಿಲ್ಲ, ಅದು ಸಮಾಜದ ಪ್ರತಿಯೊಂದು ಸಂಸ್ಥೆಯಲ್ಲಿಯೂ, ವೈವಿಧ್ಯತೆಯ ಗೌರವದಲ್ಲಿಯೂ ಪ್ರತಿಫಲಿಸಬೇಕು. ಹಾಗೂ ಶಿಕ್ಷಣವೇ ಅತ್ಯಂತ ದೊಡ್ಡ ಶಕ್ತಿಯಾಗಿದ್ದು, ವಿದ್ಯಾರ್ಥಿಗಳು ಅಡೆತಡೆಗಳನ್ನು ದಾಟಿ ಸಾಧನೆ ಮಾಡುವುದರಿಂದ ಅಂಬೇಡ್ಕರ್ ಅವರ ಕನಸು ಸಾಕಾರಗೊಳ್ಳುತ್ತದೆ ಎಂದು ಅವರು ತಿಳಿಸಿದರು

    ನ್ಯಾಯಾಂಗ, ಶಿಕ್ಷಣ, ಉದ್ಯೋಗ, ಅಡಳಿತ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ನಾಯಕತ್ವವನ್ನು ವಹಿಸುವತ್ತ ಯುವಕರು ಮುಂದಾಗಬೇಕು. ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದು ಕೇವಲ ಕಾರ್ಯಕ್ರಮಗಳಿಗೆ ಸೀಮಿತವಾಗದೇ, ನಮ್ಮ ನಡವಳಿಕೆ, ನಿರ್ಧಾರಗಳು ಮತ್ತು ಧೈರ್ಯದಲ್ಲಿ ಅವರ ಮೌಲ್ಯಗಳನ್ನು ಅನುಸರಿಸುವುದರ ಮೂಲಕ ಇರಬೇಕು ಎಂದು ಅವರು ಹೇಳಿದರು.

    ಬಡವರು, ಶ್ರೀಮಂತರು, ಮಹಿಳೆಯರು ಹಾಗೂ ಎಲ್ಲಾ ವರ್ಗಗಳ ಜನರು ಸಮಾನ ಹಕ್ಕುಗಳೊಂದಿಗೆ ಬದುಕುವ ಸಮಾನತೆಯ ಸಮಾಜ ನಿರ್ಮಾಣವೇ ಅಂಬೇಡ್ಕರ್ ಅವರ ಕನಸು. ಅದನ್ನು ಸಾಕಾರಗೊಳಿಸಲು ಎಲ್ಲರೂ ಸಂವಿಧಾನದ ಆಶಯಗಳನ್ನು ಪಾಲಿಸಬೇಕು ಎಂದು ಅವರು ತಿಳಿಸಿದರು.

    ಡಾ.ಬಿ.ಆರ್.ಅಂಬೇಡ್ಕರ್ ಅವರು ಮುಂದೆ ಬರ್ತಾ ಇರುವಂತಹ ನಮ್ಮ ಪೀಳಿಗೆಗಳಿಗೆಲ್ಲ ಒಂದು ದಾರಿ ದೀವಿಗೆ ಆಗಿದ್ದಾರೆ. ಅವರ ಒಂದು ಜೀವನವನ್ನು ನೋಡಿದ್ರೆ, ನಾವು ಅಲ್ಲಿ ತುಂಬಾ ಸುಖವನ್ನು ನೋಡಲ್ಲ. ಅವರು ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನ ಎದುರಿಸಿ ಜೀವನದ ಒಂದು ಹಂತಕ್ಕೆ ಬಂದಂತವರು. ಅವರು ಸಾಕಷ್ಟು ತಾರತಮ್ಯ, ಅಮಾನವೀಯತೆ ಅನುಭವಿಸಿದ್ರು, ಸಾಕಷ್ಟು ಅಡೆತಡೆಗಳನ್ನ ಅವರು ಎದುರಿಸಿದರು. ಆದರೆ ತಾವು ಅನುಭವಿಸಿದ ನೋವುಗಳನ್ನು ಪಕ್ಕಕ್ಕೆ ಸರಿಸಿ, ಯಾವುದಕ್ಕೂ ಕೋಪ ಮಾಡಿಕೊಳ್ಳದೆ, ಯಾವಾಗ್ಲೂ ಹೇಳುವಾಗ, “ಎಜುಕೇಶನ್ ಇಸ್ ದ ಗ್ರೇಟೆಸ್ಟ್ ವೆಪನ್” ಅಂತ ತಿಳಿಸಿದ್ದಾರೆ.

    ನಮ್ಮ ಶಿಕ್ಷಣ ಏನಿದೆ, ಅದು ಎಲ್ಲಕ್ಕಿಂತ  ಮುಖ್ಯವಾಗಿರುವಂತಹ ಅಸ್ತ್ರ ಅನ್ನೋದನ್ನ ಅವರು ಹೇಳಿದ್ದಾರೆ. ನಮ್ಮಲ್ಲಿ ಅರಿವು ಇರಬೇಕು, ನಮ್ಮಲ್ಲಿ ಆಲೋಚನೆ ಮಾಡುವಂತಹ ಶಕ್ತಿ ಇರಬೇಕು, ಮತ್ತೆ ಧೈರ್ಯ ಇರಬೇಕು ಅನ್ನುವಂತದ್ದು ಅವರು ತಮ್ಮ ಎಲ್ಲಾ ಕಾರ್ಯಗಳಿಂದ ತಿಳಿಸಿಕೊಟ್ಟಿದ್ದಾರೆ.

    ಡಾ. ಅಂಬೇಡ್ಕರ್ ಅವರು ಏನು ಹೇಳಿದ್ದಾರೆ, ಅದು ಬರೀ ಒಂದು ಸಮುದಾಯಕ್ಕಲ್ಲ, ಅದು ಇಡೀ ಸಮಾಜಕ್ಕೆ ಹೇಳಿದ್ದಾರೆ. “ಜಸ್ಟಿಸ್ ಇಸ್ ನಾಟ್ ಎ ಪ್ರಿವಿಲೆಜ್, ಬಟ್ ಎ ಗ್ಯಾರಂಟಿ” ಅಂತ ಡಾ. ಅಂಬೇಡ್ಕರ್ ಅವರು ಹೇಳಿದ್ದಾರೆ.

    ಹುಬ್ಬಳ್ಳಿ ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಮಾತನಾಡಿ, ಸ್ವಾತಂತ್ರ್ಯದ ಸಮಯದಲ್ಲಿ ಕೆಲವು ವಿಶ್ವ ನಾಯಕರು ದೇಶವು ದೀರ್ಘಕಾಲ ಅಖಂಡವಾಗಿ ಉಳಿಯುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು. ಆದರೆ ಸ್ವಾತಂತ್ರ್ಯವಾಗಿ ಸುಮಾರು 8 ದಶಕಗಳ ನಂತರವೂ ಭಾರತವು ಸಮಗ್ರವಾಗಿ ಮತ್ತು ಗಟ್ಟಿಯಾಗಿ ಉಳಿದಿದೆ ಅಂದರೆ ಅದಕ್ಕೆ ಕಾರಣ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವೇ ಎಂದು ಅವರು ತಿಳಿಸಿದರು.

    ಒಂದು ಕುಟುಂಬ ಸುಗಮವಾಗಿ ನಡೆಯಲು ನಿಯಮಗಳು ಅಗತ್ಯವಾದಂತೆ, ದೇಶದ ಆಡಳಿತಕ್ಕೂ ಸಂವಿಧಾನದಲ್ಲಿ ನಿಗದಿಪಡಿಸಿದ ಕಾನೂನುಗಳು ಮತ್ತು ಕಟ್ಟಳೆಗಳು ಅತ್ಯವಶ್ಯಕವಾಗಿವೆ. ದೇಶದ ಎಲ್ಲಾ ಕಾರ್ಯಗಳು ಸಂವಿಧಾನಿಕ ಮಾನದಂಡಗಳ ಆಧಾರದ ಮೇಲೆಯೇ ನಡೆಯುತ್ತಿದೆ ಎಂದು ಅವರು ಹೇಳಿದರು.

    ಅಂಬೇಡ್ಕರ್ ಜಯಂತಿ ಸೇರಿದಂತೆ ಮಹಾನ್ ನಾಯಕರ ಜಯಂತಿಗಳನ್ನು ಎಲ್ಲ ವರ್ಗದ ಜನರು ತಮ್ಮ ಹಬ್ಬದಂತೆ ಆಚರಿಸಬೇಕು. ಕೆಲವೇ ಸಮುದಾಯಗಳಿಗೆ ಸೀಮಿತವಾಗದೇ, ಸಮಾಜದ ಪ್ರತಿಯೊಬ್ಬರೂ ಭಾಗವಹಿಸಿದಾಗ ಮಾತ್ರ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಅವರು ತಿಳಿಸಿದರು.

    ಸಂವಿಧಾನದ ಮಹತ್ವವನ್ನು ಶಾಲೆ, ಕಾಲೇಜು ಮತ್ತು ಮನೆಮನೆಗಳಲ್ಲಿ ಬೋಧಿಸುವುದು ಅಗತ್ಯ. ಇದರ ಅರಿವು ಮೂಡಿದಾಗ ಮಾತ್ರ ನಾಗರಿಕರು ಜವಾಬ್ದಾರಿಯುತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

    ಹುಬ್ಬಳ್ಳಿ ಜೆ.ಜಿ.ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಮಲ್ಲಮ್ಮ ಯಾಟಗಲ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತು ಪ್ರಧಾನ ಉಪನ್ಯಾಸ ನೀಡಿದರು.

    ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ ಸ್ವಾಗತಿಸಿದರು. ಎಡಿಸಿ ಗೀತಾ ಸಿ.ಡಿ ಅವರು ಸಂವಿಧಾನದ ಪೂರ್ವ ಪೀಠಿಕೆಯನ್ನು ಬೋಧಿಸಿದರು.  ಪ್ರವೀಣ ಮಸಕಿ ಅವರು ಕಾರ್ಯಕ್ರಮ ನಿರೂಪಿಸಿದರು. ಎಂ.ಬಿ. ಸನ್ನೇರಿ ಅವರು ವಂದಿಸಿದರು.

    ಕಾರ್ಯಕ್ರಮದಲ್ಲಿ ಬೌದ್ದ ಬಿಕ್ಕುಗಳಿಂದ ಬೌದ್ಧ ನಮನ ಮತ್ತು ಪ್ರಾರ್ಥನೆ ಜರುಗಿತು. ವೇದಿಕೆಯಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಅಡಿವೇಶ ಗಿರೆಪ್ಪಾ ಇಟಗಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಮಹಾನಗರ ಸಮಿತಿ ಅಧ್ಯಕ್ಷ ಪ್ರಕಾಶ ಹಳಿಯಾಳ, ಮಾಜಿ ಸಂಸದ ಪೆÇ್ರ.ಐ.ಜಿ.ಸನದಿ ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ ಆರ್ಯ, ಎಸಿ ಶಾಲಂ ಹುಸೇನ್, ತಹಶೀಲ್ದಾರ್ ಡಾ.ಡಿ.ಎಚ್.ಹೂಗಾರ, ತಾ.ಪಂ.ಇಓ ಗಂಗಾಧರ ಕಂದಕೂರ ಸೇರಿದಂತೆ  ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ಸದಸ್ಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮುಖಂಡರು, ಹಿಂದುಳಿದ ವರ್ಗಗಳ ಪ್ರಮುಖರು, ವಿದ್ಯಾರ್ಥಿಗಳು, ಮಹಿಳೆಯರು ಸಾರ್ವಜನಿಕರು ಸೇರಿದಂತೆ ಇತರರು ಇದ್ದರು.

    ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ, ಎಸ್.ಎಸ್.ಎಲ್.ಸಿ, ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತದಿಂದ ಸನ್ಮಾನಿಸಿ, ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ಸದಸ್ಯರು, ದಲಿತ ಚಿಂತಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸಮಾಜದ ಹಿರಿಯರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

    ಭವ್ಯ ಮೆರವಣಿಗೆ:

    ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರಣಿಗೆಗೆ ಇಂದು (ಏ.14) ಬೆಳಿಗ್ಗೆ  ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಚಾಲನೆ ನೀಡಿದರು.  ವಿವಿಧ ಕಲಾತಂಡದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರದ ಭವ್ಯ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭವಾಗಿ ಧಾರವಾಡ ನಗರದ ಕೋರ್ಟ ಸರ್ಕಲ್, ಸಂಗಮ ಸರ್ಕಲ್, ಮದಾರಮಡ್ಡಿ, ಭೂಸಪ್ಪ ಚೌಕ, ಮೇದಾರ ಓಣಿ, ಕೆ.ಸಿ.ಸಿ ಬ್ಯಾಂಕ್ ಮೂಲಕ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದವರೆಗೆ ಜರುಗಿತು.

    ಈ ಸಂದರ್ಭದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಎಡಿಸಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಾಧರ ದೊಡಮನಿ, ಪಶು ಪಾಲನೆ ಇಲಾಖೆಯ ಉಪನಿರ್ದೇಶಕ ಡಾ.ಎಸ್.ವಿ.ಸಂತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಎಲ್ಲಾ ಸಮುದಾಯದ ಮುಖಂಡರು, ಗಣ್ಯವ್ಯಕ್ತಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

    ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಯಲ್ಲಿ ಜಾನಪದ ಕುಣಿತ, ಕರಡಿ ಮಜಲು, ನಂದಿಕೋಲು, ಜಗ್ಗಲಿಗಿ ಮೇಳ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ, ಮೆರವಣಿಗೆಯ ಮೆರಗು ಹೆಚ್ಚಿಸಿದವು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹು-ಧಾ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು (ಏ.14) ಬೆಳಿಗ್ಗೆ  ಆಲೂರು ವೆಂಕಟರಾವ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಸೇರಿದಂತೆ ವಿವಿಧ ಗಣ್ಯರಿಂದ ಮಾಲಾರ್ಪಣೆ ಮಾಡಲಾಯಿತು.

    admin
    • Website

    Related Posts

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.