ತುಮಕೂರು: ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮ ವಿಗ್ರಹ ಕೆತ್ತನೆ ಮಾಡಿರುವ ಶಿಲ್ಪಿ ಡಾ.ಅರುಣ್ ಯೋಗಿರಾಜ್ ಅವರನ್ನು ತುಮಕೂರಿನಲ್ಲಿ ಚಿನ್ನ ಬೆಳ್ಳಿ ಕೆಲಸಗಾರರ ಸಂಘದಿಂದ ಅದ್ದೂರಿ ಮೆರವಣಿಗೆ ಮೂಲಕ ಸನ್ಮಾನಿಸಲಾಯಿತು.
ಚಿನ್ನ ಬೆಳ್ಳಿ ವರ್ತಕರ ಸಂಘದ 25ನೇ ವರ್ಷದ ರಜತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮ್ಮಿಲನ ಕಾರ್ಯಕ್ರಮಕ್ಕೆ ತುಮಕೂರು ನಗರದ ಪ್ರಮುಖ ರಸ್ತೆಗಳಲ್ಲಿ ಅದ್ದೂರಿ ಮೆರವಣಿಗೆ ಮೂಲಕ ಡಾ. ಅರುಣ್ ಯೋಗಿರಾಜ್ ಅವರನ್ನು ಕರೆದುಕೊಂಡು ಹೋಗಲಾಯಿತು.
ನೂರಾರು ಮಂದಿ ಚಿನ್ನ ಬೆಳ್ಳಿ ವರ್ತಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296