ತುಮಕೂರು: ಡಾ.ಬಿ.ಆರ್. ಅಂಬೇಡ್ಕರ್ ಕೋಚಿಂಗ್ ಸೆಂಟರ್ ನ ದಶಮಾನೋತ್ಸವ ಸಮಾರಂಭವು ತುಮಕೂರು ನಗರದ ಅಮಾನಿ ಕೆರೆ ಎದುರಿನ ಕನ್ನಡ ಭವನದಲ್ಲಿ ಫೆಬ್ರವರಿ 1ರಂದು ಅದ್ಧೂರಿಯಾಗಿ ನಡೆಯಲಿದೆ.
ದೇಶದ ನಂಬರ್ 1 IAS ತರಬೇತುದಾರ ಹಾಗೂ ಅಕ್ಕ IAS ಅಕಾಡೆಮಿಯ ನಿರ್ದೇಶಕ ಡಾ.ಶಿವಕುಮಾರ್ ಮತ್ತು ಕನ್ನಡ–ತೆಲುಗು ಚಲನಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
BVS (ಭಾರತೀಯ ವಿದ್ಯಾರ್ಥಿ ಸಂಘ) ಸದಸ್ಯರು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು, ಹಾಗೂ ಅಂಬೇಡ್ಕರ್ ತತ್ವದಲ್ಲಿ ನಂಬಿಕೆ ಹೊಂದಿರುವ ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದಾಗಿದೆ.
ಬೆಳಿಗ್ಗೆ 10:30ಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭಗೊಳ್ಳಲಿದೆ. IAS ತರಬೇತಿ ಹಾಗೂ ಸಾಮಾಜಿಕ ನ್ಯಾಯದ ಹೋರಾಟದ ಬಗ್ಗೆ ಮಹತ್ವದ ವಿಷಯಗಳು ಕಾರ್ಯಕ್ರಮದಲ್ಲಿ ಚರ್ಚೆಯಾಗಲಿವೆ. ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4