ಬೀದರ್: ಔರಾದ ತಾಲೂಕಿನ ಮಾದಿಗ ಸಮುದಾಯದ ವತಿಯಿಂದ ಇಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮ ಪಟ್ಟಣದಲ್ಲಿ ಆಚರಿಸಲಾಯಿತು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮುಖಂಡರಾದ ಸುಧಾಕರ ಕೊಳ್ಳೂರು ಮಾತನಾಡಿ, ಅಂಬೇಡ್ಕರ್ ಅವರ ವಿಚಾರಗಳು ಮತ್ತು ಅವರು ನೀಡಿದ ಸಂವಿಧಾನ ಈ ದೇಶದ ಬೆಳವಣಿಗೆಗೆ ದಿಕ್ಸೂಚಿಯಾಗಿದೆ. ಸಾಮಾಜಿಕ ಸಮಾನತೆ, ಶೋಷಿತರ ಉದ್ಧಾರ ಮತ್ತು ನ್ಯಾಯಯುತ ಸಮಾಜ ನಿರ್ಮಾಣಕ್ಕಾಗಿ ಅವರ ಹೋರಾಟ ಇಂದಿಗೂ ಸಹ ಪ್ರಸ್ತುತವಾಗಿದೆ. ಅವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಿಳಿಸಿದರು.
ಸಮುದಾಯದ ಮುಖಂಡರಾದ ಅಶೋಕ್ ದರಬಾರೆ, ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿದ ಮೇಘ, ಬಸವರಾಜ್ ಮಾಳಿಗೆ ಜಾನ್ಸನ್ ಅವರು ಮಾತನಾಡಿದರು. ಅಮರ ಜಲವಾ, ಮಾರುತಿ, ಯೆಶಪ್ಪ, ಅಬ್ರಾಮ್, ಶಾಮ್ವೇಲ್, ಅಜಯ, ತುಕಾರಾಂ, ರವಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW