ಮಧುಗಿರಿ: ಇಂದು ಸಂವಿಧಾನ ಜಾರಿಗೆ ಬಂದ ದಿನ, ಸಂವಿಧಾನದಿಂದ ಸಾಮಾನ್ಯ ಜನತೆಗೆ ಮೂಲಭೂತ ಹಕ್ಕುಗಳನ್ನು ಮೀಸಲಾತಿಯ ಮೂಲಕ, ಸಾಮಾಜಿಕ ನ್ಯಾಯವನ್ನು ಡಾ.ಬಿ.ಆರ್. ಅಂಬೇಡ್ಕರ್ ನೀಡಿದರು ಎಂದು ಮಧುಗಿರಿ ತಾಲ್ಲೂಕ್ ಮಿಡಿಗೇಶಿ ಹೋಬಳಿ ನೇರಳೇಕೆರೆ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರಾದ ಮಲ್ಲಿಕಾರ್ಜುನ್ ಹೇಳಿದರು.
ಗಣರಾಜ್ಯೋತ್ಸವ ಅಂಗವಾಗಿ ಶಾಲೆಯಲ್ಲಿ ಏರ್ಪಡಿಸಿದ್ದ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಬರಹಗಾರರಾದ ಎನ್.ಎಸ್.ಈಶ್ವರ್ ಪ್ರಸಾದ್ ಮಾತನಾಡಿ, ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳಲ್ಲಿ ಸಮಾನತೆ ನೀಡಿದರು. ಶಿಕ್ಷಣ ವ್ಯವಸ್ಥೆಯಲ್ಲಿ ಅಸಮಾನತೆ ಕಂಡುಬರುತ್ತದೆ. ಉಳ್ಳವರಿಗೆ ಖಾಸಗಿ ಆಂಗ್ಲ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ನೀಡಿದರೆ, ಸರ್ಕಾರಿ ಶಾಲೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳು ವ್ಯಾಸಂಗ ಮಾಡುವ ಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಗ್ರಾಮಗಳ ಗಣ್ಯ ವ್ಯಕ್ತಿಗಳ ಮಕ್ಕಳು ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುವುದರಿಂದ ಸರ್ಕಾರಿ ಶಾಲೆಗಳ ಕಡೆ ಗಮನ ಹರಿಸದೆ ಇರುವುದು, ಸರ್ಕಾರಿ ಶಾಲೆಗಳು ಹಿಂದುಳಿಯನ್ನು ಕಾರಣವಾಗಿದೆ. ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಂತೆ ಆಗಿದೆ. ಶಿಕ್ಷಣದಲ್ಲಿ ಸಮಾನತೆ ಶಿಕ್ಷಣ ನೀಡಲು ಖಾಸಗಿ ಶಾಲೆಗಳನ್ನು ರಾಷ್ಟ್ರೀಕರಣ ಮಾಡಿ ಎಲ್ಲ ಮಕ್ಕಳಿಗೂ ಸಮಾನತೆಯ ಶಿಕ್ಷಣ ನೀಡಬೇಕೆಂದು ಅವರು ಇದೇ ವೇಳೆ ಒತ್ತಾಯ ಮಾಡಿದರು.
ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ, ಅಧ್ಯಕ್ಷರಾದ ಸುನಿತಾ ವಹಿಸಿದ್ದರು. ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದ್ಯಸರಾದ ಉಮಾದೇವಿ ಹಾಗೂ ಎಸ್ ಡಿ ಎಂ ಸಿ ಎಲ್ಲಾ ಸದಸ್ಯರು ಹಾಜರಿದ್ದರು. ಸ್ವಾಗತವನ್ನು ಶಿಕ್ಷಕರಾದ ತಿಪ್ಪೇಸ್ವಾಮಿ ಹಾಗೂ ವಂದನಾರ್ಪಣೆಯನ್ನು ಶಿಕ್ಷಕರಾದ ಏಜೆಜ್ ಪಾಷ ನಡೆಸಿಕೊಟ್ಟರು .
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx