ಚಿತ್ರದುರ್ಗ: ಏಪ್ರಿಲ್ 5ರಂದು ಮಾಜಿ ಉಪ-ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 115ನೇ ಜಯಂತಿಯ ಕಾರ್ಯಕ್ರಮವನ್ನು ಕೆಪಿಸಿಸಿ ವತಿಯಿಂದ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದರು.
ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸಚಿವ ಡಿ ಸುಧಾಕರ್ ರವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆಂಜನೇಯ, ಕೆಪಿಸಿಸಿ ವತಿಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸುಮಾರು 25ರಿಂದ 30 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಈ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದ ಅಂಬೇಡ್ಕರ್ ಜಯಂತಿ ಹಾಗೂ ಡಾ.ಬಾಬು ಜಗಜೀವನ್ ರಾಮ್ ರವರ ಜಯಂತಿ ಆಚರಣೆಗಳನ್ನು ಜಿಲ್ಲೆಗಳಿಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದೇವೆ . ಪ್ರತಿ ವರ್ಷ ಸಹ ಒಂದೊಂದು ಜಿಲ್ಲೆಗಳಲ್ಲಿ ಈ ರೀತಿಯಲ್ಲಿಯೇ ಆಚರಣೆಗಳು ನಡೆಯುತ್ತವೆ ಎಂದರು.
ಡಾ.ಬಾಬು ಜಗಜೀವನ್ ರಾಮ್ ರವರ ಜಯಂತಿಗೆ ಕೇವಲ ಐದು ದಿನಗಳು ಮಾತ್ರವೇ ಬಾಕಿ ಉಳಿದಿದ್ದು, ಹಗಲು ರಾತ್ರಿ ಪೂರ್ವ ಸಿದ್ದತೆಗಳು ನಡೆದಿವೆ. ಈಗಾಗಲೇ ಹಿರಿಯೂರು ಹೊರವಲಯದ ಹುಳಿಯಾರ್ ಮುಖ್ಯ ರಸ್ತೆಯಲ್ಲಿನ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ನಾಗೇಂದ್ರನಾಯ್ಕ ಲೇಔಟ್ ನ ತಾಲ್ಲೂಕು ಸ್ಟೇಡಿಯಂ ಮುಂಭಾಗದ ಮೈದಾನದಲ್ಲಿ ಸ್ವಚ್ಛತೆ ಕಾರ್ಯ ಆರಂಭಿಸಲಾಗಿದೆ .
ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ , ರಾಜ್ಯ ಮುಖಂಡರಾದ ರಾಮಲಿಂಗರೆಡ್ಡಿ , ಮಲ್ಲಿಕಾರ್ಜುನ ಖರ್ಗೆ, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ , ಕೆ ಹೆಚ್ ಮುನಿಯಪ್ಪ ಮುಂತಾದವರು ಆಗಮಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಿ.ಸುಧಾಕರ್ ಮಾತನಾಡಿ, ನಾವು ಸಹ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದೇವೆ ಕಾರ್ಯಕ್ರಮದಲ್ಲಿ ಸುಮಾರು 15 ಸಾವಿರದಿಂದ 20 ಸಾವಿರ ಜನ ಸೇರುವ ನಿರೀಕ್ಷೆ ಇದೆ. ರಾಜ್ಯ ಮಟ್ಟದ ಬಹಳಷ್ಟು ನಾಯಕರು ಆಗಮಿಸಲಿದ್ದಾರೆ. ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಇಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಹೇಳಿರುವುದರಿಂದ ಈ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹ ಶ್ರಮಿಸುತ್ತಿದ್ದಾರೆ . ಜಿಲ್ಲೆಯಾದ್ಯಾಂತ ಕಾಂಗ್ರೆಸ್ ಕಾರ್ಯಕರ್ತರು ಡಾ.ಬಾಬು ಜಗಜೀವನ್ ರಾಮ್ ಜಯಂತಿಗೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಜಿ.ಎಸ್. ಮಂಜುನಾಥ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ. ರಮೇಶ್ , ಅಮೃತೇಶ್ವರ ಸ್ವಾಮಿ , ಜಿಲ್ಲಾ ಪಂಚಾಯತಿ ಸದಸ್ಯರಾದ ನಾಗೇಂದ್ರ ನಾಯ್ಕ , ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಚರಾದ ಡಾ.ಸುಜಾತ, ಮಹಿಳಾ ಘಟಕದ ಅಧ್ಯಕ್ಷರಾದ ಎಂ.ಎಸ್. ಗೌರಿ ಮುರುಳಿಧರನ್ ಹಿರಿಯೂರು , ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾಮಣಿ , ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ರಜೀಯಾ ಸುಲ್ತಾನ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ನಂದಿನಿ ಗೌಡ, ಅಭಿಮತ ಕನ್ನಡ ವಾರಪತ್ರಿಕೆಯ ಸಂಪಾದಕರು ಹಾಗೂ ಪತ್ರಿಕಾ ಸಂಘದ ಅಧ್ಯಕ್ಷರು ಹಾಗೂ ಎಸ್.ಸಿ.ಘಟಕದ ಅಧ್ಯಕ್ಷರಾದ ಜಿ.ಎಲ್.ಮೂರ್ತಿ , ಗಿಡ್ಡೋಬನಹಳ್ಳಿ ಅಶೋಕ್, ಹನುಮಂತ, ಧನುಶ್, ಗಿರೀಶ್, ಜ್ನಾನೇಶ್, ಕಾರ್ಮಿಕ ವಿಭಾಗದ ಶಿವಕುಮಾರ್ ವಿ. ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್ ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ) .
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5