ಬೀದರ್: ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ (ಚೌದ್ರಿ) ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಅಸ್ಪೃಶ್ಯತೆಯ ನಿವಾರಣಾ ಹೋರಾಟದ ಮುಂಚೂಣಿ ವಹಿಸಿದ ಧೀಮಂತ ನಾಯಕ ಶೋಷಿತರ ದಮನಿತರ ಧ್ವನಿ. ಹಸಿರು ಕ್ರಾಂತಿಯ ಹರಿಕಾರರಾದ ಡಾ.ಬಾಬು ಜಗಜೀವನರಾಮ್ ಅವರ ಜನ್ಮದಿನದಂದು ಅವರಿಗೆ ಗೌರವದ ನಮನಗಳನ್ನು ಸಲ್ಲಿಸಲಾಯಿತು.
ರವಿಕುಮಾರ್ ಮಲ್ಲಿಗೆ ಮಾತನಾಡಿ, ಡಾ.ಬಾಬು ಜಗಜೀವನರಾಮ್ ಸ್ವಾತಂತ್ರ್ಯ ಹೋರಾಟಗಾರರಾಗಿ, ಸ್ವಾತಂತ್ರ್ಯನಂತರ ಭಾರತ ಸರ್ಕಾರದ ಸಚಿವರಾಗಿ, ಉಪ ಪ್ರಧಾನಿಯಾಗಿ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ನಾಯಕರು. ಕೃಷಿ ಸಚಿವರಾಗಿದ್ದಾಗ ಸುಧಾರಿತ ಬಿತ್ತನೆ ಬೀಜ ಹಾಗೂ ಸುಧಾರಿತ ತಳಿಗಳನ್ನು ಅನುಷ್ಠಾನಗೊಳಿಸಿ ಆಹಾರ ಧಾನ್ಯಗಳ ಕೊರತೆ ನೀಗಿಸಿದ ಹಸಿರುಕ್ರಾಂತಿಯ ಹರಿಕಾರ ಎನಿಸಿಕೊಂಡರು. ಅವರ ತತ್ವಾದರ್ಶಗಳು ವಿಚಾರಧಾರೆಗಳು ನಮಗೆಲ್ಲರಿಗೂ ದಾರಿದೀಪವಾಗಿವೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆತ್ಮಾರಾಮ್. ಗ್ರಾ.ಪಂ. ಸದಸ್ಯ ಕರಬಸಪ್ಪಾ ಸೊರಾಳೆ, ತುಳಸಿರಾಮ್ ಮಲ್ಲಿಗೆ, ಎಂ.ಡಿ.ನಯೂಮ್, ಮುನ್ನ ಸಾಹೇಬ್, ಜಾವಿದ್, ಆನಂದ್ ಸೋರಾಳೆ ಶಿವಕುಮಾರ, ಉಮಕಾಂತ್, ಕಮಲಾಕರ್ ಮಾಳೆಗೆ, ಪೌಲ್ ಧೋಳೆ, ಬಸವರಾಜ್, ಪವನ್, ವಿಜಯಕುಮಾರ್, ಸತೀಶ್, ಜೀವನ ಮಾಳೆಗೆ, ಜರಪ್ಪ ಧೋಳೆ, ಅಂಕುಶ್, ರಮೇಶ್, ಗ್ರಾಮ ಪಂಚಾಯಿತಿ ಸಿಬ್ಬಂದಿ ಪತ್ರಕರ್ತ ಅರವಿಂದ ಮಲ್ಲಿಗೆ ಹಾಗೂ ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW