nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ:  ಸಚಿವ ಜಿ. ಪರಮೇಶ್ವರ್
    ತುಮಕೂರು March 23, 2025

    ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ:  ಸಚಿವ ಜಿ. ಪರಮೇಶ್ವರ್

    By adminMarch 23, 2025No Comments2 Mins Read
    parameshwar

    ತುಮಕೂರು:  ನಗರದ ಮಹಾನಗರ ಪಾಲಿಕೆ ಆವರಣ ಟೌನ್ ಹಾಲ್ ಐತಿಹಾಸಿಕ ಕಟ್ಟಡದ ಮುಂಭಾಗ ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿ ಕುರಿತು ಅಧಿಕಾರಿ ಹಾಗೂ ದಲಿತ ಮುಖಂಡರೊಂದಿಗೆ ಪೂರ್ವ ಭಾವಿ ಸಭೆ ನಡೆಸಿ ಮಾತನಾಡಿದ ಅವರು ಡಾ.ಬಿ.ಆರ್.ಅಂಬೇಡ್ಕರ್ ದಿನಾಚರಣೆಯಂದು ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು. ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯಿಂದ ಸುಮಾರು 60 ವರ್ಷಗಳ ದಲಿತ ಸಮುದಾಯದವರ ಬೇಡಿಕೆ ಈಡೇರಿದಂತಾಗುತ್ತದೆ. ಪ್ರತಿಮೆಯು 12 ಅಡಿ ಎತ್ತರ, 1000 ಕೆ.ಜಿ. ತೂಕ ಹೊಂದಿದ್ದು, ತಯಾರಿಕೆಗೆ 39 ಲಕ್ಷ ರೂ. ವೆಚ್ಚವಾಗಿದೆ. ಪ್ರತಿಮೆಯನ್ನು ಸಿದ್ಧಾರ್ಥ ಸಂಸ್ಥೆಯಿಂದ ಕೊಡುಗೆಯಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.

    ಚುನಾವಣೆ ನೀತಿ ಸಂಹಿತೆಯಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. ಈ ಬಾರಿ ದಸರಾ ಹಬ್ಬದ ಮಾದರಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಗೋಷ್ಠಿಗಳನ್ನೊಳಗೊಂಡಂತೆ ಜಿಲ್ಲೆಯ ಶಕ್ತಿಯ ಸಂಕೇತವಾಗಿ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ದಸರಾ ಉತ್ಸವದಲ್ಲಿ ಪಾಲ್ಗೊಂಡಂತೆ ಅದೇ ಭಾವನೆ, ಉತ್ಸಾಹ, ಸಂಭ್ರಮದಲ್ಲಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮ ಕೂಡ ಜರುಗಬೇಕು. ಇದು ಕೇವಲ ಕಾರ್ಯಕ್ರಮವಲ್ಲ, ಸಮಾಜಕ್ಕೆ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನಾತ್ಮಕ ಆದರ್ಶಗಳನ್ನು ನೆನಪಿಸುವ ಮಹತ್ವದ ಕ್ಷಣವಾಗಬೇಕು ಎಂದು ತಿಳಿಸಿದರು.

    ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲು ಸಚಿವ ಸಂಪುಟದ ಅನುಮೋದನೆ ಪಡೆದುಕೊಳ್ಳಲಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅಂಬೇಡ್ಕರ್ ಪುತ್ಥಳಿಗಳನ್ನು ಸ್ಥಾಪಿಸಲಾಗಿದೆ. ಆದರೆ ತುಮಕೂರಿನಲ್ಲಿ ಕೈಗೂಂಡಿರಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಹಾಗೂ ಬಾಬು ಜಗಜೀವನ್ ರಾಮ್ ಪ್ರತಿಮೆ ಇಡಲು ಮುಂದಾದಾಗ ಕಾನೂನಾತ್ಮಕವಾಗಿ ಅನೇಕ ಅಡಚಣೆಗಳು ಬಂದಿವೆ. ಆದರೆ ಈಗ ಸಚಿವ ಸಂಪುಟದಿಂದ ಅನುಮೋದನೆ ದೊರೆತಿರುವುದರಿಂದ ಯಾರ ವಿರೋಧವೂ ಬರುವುದಿಲ್ಲವೆಂದು ತಿಳಿಸಿದರು.

    ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮವು ರಾಜ್ಯದ ಇತಿಹಾಸದಲ್ಲಿ ನೆನಪಿನಲ್ಲಿ ಉಳಿಯುವಂತಹ ಕಾರ್ಯಕ್ರಮವಾಗಬೇಕು. ಅಂಬೇಡ್ಕರ್ ಅವರ ಕುರಿತು ಮುಂದಿನ ಪೀಳಿಗೆಯವರಿಗೂ ಸಂದೇಶಗಳನ್ನು ತಲುಪಿಸಬೇಕು. ಅಂಬೇಡ್ಕರ್ ಪ್ರತಿಮೆ ಬಳಿ ಸಂವಿಧಾನ ಪೀಠಿಕೆಯ ಶಿಲೆಯನ್ನು ಸ್ಥಾಪಿಸಲಾಗುವುದು ಎಂದರು.

    ನನೆಗುದಿಗೆ ಬಿದ್ದಿರುವ ಬಾಬು ಜಗಜೀವನ್ ರಾಮ್ ಅವರ ಭವನ ನಿರ್ಮಾಣದ ಸಮಸ್ಯೆಯನ್ನು ಬಗೆಹರಿಸಲಾಗುವುದು. ಈ ಬಗ್ಗೆ ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು. ಬಾಬು ಜಗಜೀವನ್ ರಾಮ್ ಪ್ರತಿಮೆಯನ್ನೂ ಸಹ ಸಿದ್ಧಾರ್ಥ ಸಂಸ್ಥೆ ವತಿಯಿಂದಲೇ ನಿರ್ಮಿಸಿಕೊಡಲಾಗುವುದೆಂದು ತಿಳಿಸಿದರಲ್ಲದೆ ಮುಂದಿನ ದಿನಗಳಲ್ಲಿ 3 ತಿಂಗಳಿಗೊಮ್ಮೆ ಪರಿಶಿಷ್ಟ ಸಮುದಾಯಗಳೊಂದಿಗೆ ಕುಂದು–ಕೊರತೆ ಸಭೆಯನ್ನು ನಾನೇ ಖುದ್ದಾಗಿ ನಡೆಸುತ್ತೇನೆ ಎಂದು ಹೇಳಿದರು.

    ಸಭೆಯಲ್ಲಿ ಮಾತನಾಡಿದ ದಲಿತ ಮುಖಂಡರು ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ನಾಡ ಹಬ್ಬದ ಮಾದರಿಯಲ್ಲಿ ಆಚರಿಸಬೇಕು. ದಲಿತ ಸಮುದಾಯದ ಕಲಾ ತಂಡಗಳೊಂದಿಗೆ ನಗರದಲ್ಲಿ ಮೆರವಣಿಗೆ ಹೊರಡಿಸಬೇಕು ಎಂದು ಸಲಹೆ ನೀಡಿದರು.

    ಒಳ ಮೀಸಲಾತಿಯನ್ನು ಜಾರಿ ಮಾಡಿಯೇ ತೀರುತ್ತೇವೆ:

    ಅಧಿಕೃತವಾದ ಜನಸಂಖ್ಯೆಯ ಆಧಾರದ ಮೇಲೆ ಒಳಮೀಸಲಾತಿ ಜಾರಿ ಮಾಡಬೇಕು. ಆದರೆ 2011ರ ನಂತರ ಜನ ಗಣತಿ ನಡೆದಿಲ್ಲ. ಸದಾಶಿವ ಆಯೋಗದ ವರದಿ ಆಧರಿಸಿ ಒಳಮೀಸಲಾತಿ ಜಾರಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಬಗ್ಗೆ ಕ್ಯಾಬಿನೆಟ್‌ ನಲ್ಲಿ ಹತ್ತಾರು ಬಾರಿ ಚರ್ಚಿಸಲಾಗಿದೆ ಎಂದರಲ್ಲದೆ, ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸುವುದು ಅಂತಿಮ ಹಂತಕ್ಕೆ ಬಂದಿದೆ. ಒಳ ಮೀಸಲಾತಿ ಜಾರಿಗೊಳಿಸುವ ಬಗ್ಗೆ ಯಾವುದೇ ರೀತಿಯ ಆತಂಕಪಡುವುದು ಬೇಡ ಎಂದು ತಿಳಿಸಿದರಲ್ಲದೆ, ಒಳ ಮೀಸಲಾತಿ ಜಾರಿಗಾಗಿ ನಡೆಯುವ ಪ್ರತಿಭಟನೆ ವೇಳೆ ಯಾರ ಬಗ್ಗೆಯೂ ಲಘುವಾಗಿ ಮಾತನಾಡಬಾರದು ಎಂದು ಮುಖಂಡರಲ್ಲಿ ಸಚಿವರು ಮನವಿ ಮಾಡಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ದಲಿತ ಸಂಘಟನೆಯ ವಿವಿಧ ಮುಖಂಡರು ಸಭೆಯಲ್ಲಿ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.