nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    • ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಜಿ.ಪರಮೇಶ್ವರ್ ಶೀಘ್ರವೇ ಗುಣಮುಖರಾಗಲು ಪ್ರಸಿದ್ಧ ದೇವಾಲಯಗಳಲ್ಲಿ ಕಾರ್ಯಕರ್ತರಿಂದ ಮನವಿ
    ಕೊರಟಗೆರೆ January 31, 2022

    ಡಾ.ಜಿ.ಪರಮೇಶ್ವರ್ ಶೀಘ್ರವೇ ಗುಣಮುಖರಾಗಲು ಪ್ರಸಿದ್ಧ ದೇವಾಲಯಗಳಲ್ಲಿ ಕಾರ್ಯಕರ್ತರಿಂದ ಮನವಿ

    By adminJanuary 31, 2022No Comments2 Mins Read
    parameshwar

    ಕೊರಟಗೆರೆ : ಮಾಜಿ ಉಪಮುಖ್ಯಮಂತ್ರಿ ಶಾಸಕ ಡಾ.ಜಿ.ಪರಮೇಶ್ವರ್ ಅವರು ಶೀಘ್ರವಾಗಿ ಕೋವಿಡ್ ನಿಂದ ಗುಣ ಮುಖವಾಗಲಿ ಎಂದು ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ತಾಲೂಕಿನ ಪ್ರಸಿದ್ಧ ದೇವಾಲಯಗಳಾದ ಕುರಂಕೋಟೆಯ ದೊಡ್ಡಕಾಯಪ್ಪ, ಸಂಜೀವಿನಿ ಕ್ಷೇತ್ರವಾದ ಸಿದ್ಧರಬೆಟ್ಟದ ಸಿದ್ದೇಶ್ವರ ಸ್ವಾಮಿಗೆ ಮತ್ತು ಚಿಕ್ಕನಹಳ್ಳಿ ಗ್ರಾಮದ ಚನ್ನಕೇಶ್ವರ ಸ್ವಾಮಿ ಹಾಗೂ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಹಮ್ಮಿಕೊಂಡು ಪ್ರಾರ್ಥನೆ ಸಲ್ಲಿಸಿದರು.

    ಪೂಜೆ ನಂತರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕೆರೆ ಶಂಕರ್ ಮಾತನಾಡಿ, ಕ್ಷೇತ್ರ ಜನಪ್ರಿಯ ಶಾಸಕರಾದ ಡಾ.ಜಿ.ಪರಮೇಶ್ವರ ರವರು ಕೊರೊನ ಮೂರನೇ ಅಲೆಯ ಸಂದರ್ಭದಲ್ಲಿ ಮನೆಯಲ್ಲಿ ಇರದೆ ಸದಾ ಕ್ಷೇತ್ರದ ಜನರೊಂದಿಗೆ ಆಭಿವೃಧಿ ಕೆಲಸಗಳಲ್ಲಿ ಕಾರ್ಯವಹಿಸುತ್ತಿದ್ದರು. ಆದರೆ ಈಗ ಅವರಿಗೆ ಕೋವಿಡ್ ಆಗಿರುವ ಕಾರಣ ಶೀಘ್ರವಾಗಿ ಗುಣ ಮುಖರಾಗಿ ಕ್ಷೇತ್ರಕ್ಕೆ ಬರಲಿ ಎಂದು ಕುರಂಕೋಟೆಯ ದೊಡ್ಡಕಾಯಪ್ಪ ಸ್ವಾಮಿಗೆ, ಸಿದ್ದರಬೆಟ್ಟದ ಸಿದ್ದೇಶ್ವರ ಸ್ವಾಮಿಗೆ, ಚಿಕ್ಕನಹಳ್ಳಿಯ ಚನ್ನಕೇಶವ ಸ್ವಾಮಿಗೆ ಹಾಗೂ ತಾಲ್ಲೂಕಿನ ವಿವಿಧ ಪ್ರಸಿದ್ಧ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದೇವೆ. ಎಂದರು.

    ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಎಸ್.ಟಿ. ಘಟಕದ ಅಧ್ಯಕ್ಷರಾದ ಗೊಂದಿಹಳ್ಳಿ ರಂಗರಾಜು ಮಾತನಾಡಿ, ರಾಜ್ಯ ಕಂಡತಹ ಸಜ್ಜನ ನಾಯಕರಾದ ಡಾ.ಜಿ.ಪರಮೇಶ್ವರರವರು ಕೋವಿಡ್ ಸಂದರ್ಭದಲ್ಲಿ ಹಲವಾರು ಕೋವಿಡ್ ರೋಗಿಗಳಿಗೆ ತಮ್ಮ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಿ ಆಸರೆಯಾಗಿದ್ದಾರೆ. ಅವರು ಬೇಗ ಗುಣರಾಗಿ ಮತ್ತೆ ಜನ ಸೇವೆಗೆ ಬರಲಿ ಎಂದು ಕ್ಷೇತ್ರ ಹಾಗೂ ರಾಜ್ಯದ ಜನರು ಹಾರೈಸುತ್ತಿದ್ದಾರೆ ಎಂದರು.

    ಕಾಂಗ್ರೆಸ್ ಹಿರಿಯ ಮುಖಂಡ ವೀರಣ್ಣ ಗೌಡ ಮಾತನಾಡಿ,  ಡಾ.ಜಿ.ಪರಮೇಶ್ವರರವರು ಕೋವಿಡ್ ಸಂದರ್ಭದಲ್ಲಿ ಕ್ಷೇತ್ರ ಮತ್ತು ಜಿಲ್ಲೆಯ ಹಲವು ಭಾಗಗಳಲ್ಲಿ ಅವರ ಸಿದ್ದಾರ್ಥ ವೈದ್ಯರಿಂದ ಕೋವಿಡ್ ರೋಗಿಗಳ ಮನೆಗೆ ತೆರಳಿ ಚಿಕಿತ್ಸೆ ಕೊಡಿಸಿ, ಉಚಿತ ಔಷದಿ ನೀಡಿದ್ದಾರೆ. ಇಂತಹ ಸಮಾಜಮುಖಿ ಶಾಸಕರು ಕೊರೊನಾದಿಂದ ಬೇಗ ಗುಣಮುಖವಾಗಿ ಬರಲಿ ಎಂದು ದೇವರಲ್ಲಿ ಕ್ಷೇತ್ರ ಹಲವಾರು ಮಹಿಳೆಯರು ಹಾಗೂ ಕಾರ್ಯಕರ್ತರು ಪ್ರಾರ್ಥಿಸುತ್ತಿದ್ದಾರೆ ಎಂದರು.

    ಹಿರಿಯ ಮುಖಂಡ ವಿಭೂತಿ ಸಿದ್ದಪ್ಪ,  ರಾಜೇಂದ್ರ ನಾಯ್ಕ, ರವಿ ಪ್ರಕಾಶ್, ವಾಲೆ ಚಂದ್ರಯ್ಯ ಇದೇ ವೇಳೆ ಮಾತನಾಡಿ ಪರಮೇಶ್ವರ್ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

    ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಅರಕೆರೆ ಶಂಕರ್, ವೀರಣ್ಣಗೌಡ, ವಿಭೂತಿ ಸಿದ್ದಪ್ಪ, ಮಹೇಶ್, ಸಿದ್ದರಾಜು, ವೆಂಕಟೇಶ್, ಮಧುಸೂದನ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷರಾದ ಗೊಂದಿಹಳ್ಳಿ ರಂಗರಾಜ್, ವಿನೋದ ನವೀನ್ ಕುಮಾರ್, ಅಖಂಡ ರಾಧ್ಯ, ಸಿದ್ದರಬೆಟ್ಟ ಮತ್ತು ಕುರಂಕೋಟೆ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026

    ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ

    July 2, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನ ವಿಭಾಗದಲ್ಲಿ ಐಸಿಎಸ್‌ ಎಸ್‌ ಆರ್–ಪ್ರಾಯೋಜಿತ ಸಂಶೋಧನ ಯೋಜನೆಗೆ ಸಂಶೋಧನ ಸಹಾಯಕರ…

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.