ತುಮಕೂರು: ನಮ್ಮ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಜಾರಿಗೆ ತರುತ್ತೇವೆ. ರಾಜ್ಯದ ಜನತೆಗೆ ಮನವಿ ಮಾಡಿಕೊಳ್ಳುತ್ತೇನೆ. ಕಾಂಗ್ರೆಸ್ ಮತ ಕೊಡುವಂತೆ ಮನವಿ ಮಾಡಿಕೊಳ್ಳುತ್ತೇನೆ. ಕಾಂಗ್ರೆಸ್ 130 ಸೀಟ್ ಬರುವ ವಿಶ್ವಾಸ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನ ಸಿದ್ದಾರ್ಥ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 133ರ ಬೂತ್ ನಂ 59ರಲ್ಲಿ ಪತ್ನಿ ಕನ್ನಿಕಾ ಪರಮೇಶ್ವರ್ ಸಮೇತ ಬಂದು ಮತ ಚಲಾವಣೆ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರಟಗೆರೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ಉದ್ದೇಶ ಪೂರ್ವಕವಾಗಿ ನಾನು ಓದಿದ ಊರು, ಶಾಲೆಯಲ್ಲೇ ಮತದಾನ ಮಾಡುತ್ತೇನೆ ಎಂದರು.
ಇಲ್ಲಿನ ನನಗೆ ಭಾವನಾತ್ಮಕ ಸಂಬಂಧ ಇದೆ. ಹಾಗಾಗಿ ನಾನು ಸ್ಪರ್ಧೆ ಮಾಡುವ ಕೊರಟಗೆರೆ ಕ್ಷೇತ್ರದಲ್ಲಿ ಮತ ವರ್ಗಾವಣೆ ಮಾಡಿಕೊಂಡಿಲ್ಲ ಎಂದರು.
ಸಂತೋಷದಿಂದ ಮತಚಲಾವಣೆ ಮಾಡಿದ್ದೇನೆ. ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಷಣ್ಮುಖಪ್ಪ ಗೆದಿಯ ಬೇಕು ಅಂತ ನಮ್ಮೆಲ್ಲರಿಗೂ ಆಸೆ ಇದೆ. ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಮತ್ತೊಮ್ಮೆ ಸರ್ಕಾರ ಮಾಡುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy