ಮೈಸೂರು: ಸಿಎಂ ಬದಲಾವಣೆ ಸಂದರ್ಭದಲ್ಲೇ ಮೈಸೂರಿನಲ್ಲಿ ದಲಿತ ನಾಯಕರು ಸಭೆ ನಡೆಸಿದ್ದಾರೆ. ಸಭೆಯ ಬಗ್ಗೆ ಪ್ರಶ್ನಿಸಿದ ವೇಳೆ ಡಾ.ಜಿ.ಪರಮೇಶ್ವರ್ ಊಟಕ್ಕಾಗಿ ಸೇರಿದ್ದೇವೆ ಅಷ್ಟೇ ಎಂದು ಉತ್ತರಿಸಿದ್ದಾರೆ.
ಮೈಸೂರಿನಲ್ಲಿ ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿದಂತೆ ಪ್ರಮುಖ ನಾಯಕರು ಚರ್ಚೆ ನಡೆಸಿದ್ದಾರೆ. ಇತ್ತೀಚೆಗೆ ಹೈಕಮಾಂಡ್ ಭೇಟಿ ಮಾಡಿ ಬಂದಿದ್ದ ಸತೀಶ್ ಜಾರಕಿಹೊಳಿ ದಲಿತ ನಾಯಕರೊಂದಿಗೆ ಪದೇ ಪದೇ ಸಭೆ ನಡೆಸುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಇದರ ನಡುವೆಯೇ ಸಿದ್ದರಾಮಯ್ಯನೇ ಸಿಎಂ ಎಂದು ಸ್ವತಃ ಸತೀಶ್ ಜಾರಕಿಹೊಳಿಯೇ ಹೇಳಿದರೂ ಒಳಗೊಳಗೇ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ದಲಿತ ಸಿಎಂ ಬೇಡಿಕೆ ಮುಂದಿಡಲು ಈ ನಾಯಕರು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.
ಮೈಸೂರಿನಲ್ಲಿ ಡಿನ್ನರ್ ಪಾರ್ಟಿ ಏರ್ಪಾಡಾದ ಬಗ್ಗೆ ಪ್ರತಿಕ್ರಿಯಿಸಿರುವ ಜಿ. ಪರಮೇಶ್ವರ್ ಎಲ್ಲರೂ ಊಟಕ್ಕೆ ಕರೆದಿದ್ದರು. ಊಟಕ್ಕಾಗಿ ಜೊತೆ ಸೇರಿದ್ದೇವೆ ಅಷ್ಟೇ. ಇಲ್ಲಿ ಸಿಎಂ ಸ್ಥಾನದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


