ತುಮಕೂರು: ನಗರದ ಶ್ರೀ ಸಿದ್ದಾರ್ಥ ಹೈಯರ್ ಎಜುಕೇಶನ್ ಅಕಾಡೆಮಿಯ 14ನೇ ವಾರ್ಷಿಕ ಘಟಿಕೋತ್ಸವದಲ್ಲಿ ಡಾ.ಇಂಪನಾ ಬಿ. ವರ್ಧನ್ ಅವರು ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ ಮತ್ತು ಚಿನ್ನದ ಪದಕ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ಡಾ. ಚೈತನ್ಯ ವರ್ಧನ್ ಮತ್ತು ಡಾ.ಅನಿತಾ ವರ್ಧನ್ ಅವರ ಪುತ್ರಿಯಾಗಿರುವ ಇಂಪನಾ, ಶ್ರೀ ಸಿದ್ದಾರ್ಥ ದಂತ ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಆಸ್ಪತ್ರೆ ಯಲ್ಲಿ ಬಿ.ಡಿ.ಎಸ್. ಪದವಿ ಪೂರೈಸಿದ್ದಾರೆ. ಇಂಪಾನ ಅವರು ನಾಲ್ಕು ವರ್ಷದ ಬಿ.ಡಿ.ಎಸ್. ಕೋರ್ಸಿನಲ್ಲಿ 19 ವಿಷಯಗಳಲ್ಲಿ 15 ವಿಷಯಗಳಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ನಾಲ್ಕೂ ವರ್ಷಗಳಲ್ಲಿ ಕಾಲೇಜಿನ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಅವರ ಈ ಶೈಕ್ಷಣಿಕ ಸಾಧನೆಗಾಗಿ ಚಿನ್ನದ ಪದಕ ಮತ್ತು ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಪ್ರಶಸ್ತಿಗಳನ್ನು ಮಾಜಿ ಕೇಂದ್ರ ಸಚಿವರು ಹಾಗೂ ರಾಜ್ಯಸಭಾ ಸದಸ್ಯರಾದ ಜೈರಾಮ್ ರಮೇಶ್ ಮತ್ತು ಶ್ರೀಸಿದ್ದಾರ್ಥ ಹೈಯರ್ ಎಜುಕೇಶನ್ ಅಕಾಡೆಮಿಯ ಚಾನ್ಸೆಲರ್ ಮತ್ತು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


