nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ
    ರಾಜ್ಯ ಸುದ್ದಿ April 24, 2026

    ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

    By adminApril 24, 2026No Comments2 Mins Read
    dr rajkumar

    ಬಳ್ಳಾರಿ:  ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ.ರಾಜ್‌ ಕುಮಾರ್ ಅವರ 97ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸುವ ಮೂಲಕ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಅಭೂತ ಗೌರವ ನಮನ ಸಲ್ಲಿಸಿದರು.

    ಈ ವೇಳೆ ಡಾ.ಬಾಬು ಜಗಜೀವನ್‌ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಡಾ.ರಾಜ್‌ ಕುಮಾರ್ ಅವರು ಅಪ್ಪಟ ಕನ್ನಡಪ್ರೇಮಿಯಾಗಿದ್ದರು. ಅವರ ಸಾಧನೆ ಹಾಗೂ ಕನ್ನಡ ನಾಡು–ನುಡಿಗೆ ಅವರು ನೀಡಿದ ಕೊಡುಗೆ ಅಪಾರ. ಕರ್ನಾಟಕ ಏಕೀಕರಣ ಮತ್ತು ಕನ್ನಡ ಭಾಷೆಯ ಉಳಿವಿಗಾಗಿ ನಡೆದ ಗೋಕಾಕ್ ಚಳುವಳಿಯಲ್ಲಿ ಡಾ.ರಾಜ್ ಅವರ ಪಾತ್ರ ಅವಿಸ್ಮರಣೀಯ. ಅವರ ನಾಯಕತ್ವದಲ್ಲಿ ನಡೆದ ಈ ಹೋರಾಟ ಕನ್ನಡ ಭಾಷೆಯ ಇತಿಹಾಸದಲ್ಲಿ ಮೈಲಿಗಲ್ಲಾಗಿದೆ ಎಂದು ಹೇಳಿದರು.

    ಡಾ.ರಾಜ್ ಕುಮಾರ್ ಅವರು ಅಂದಿನ ಕಾಲದ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರು ಕೇವಲ ಒಂದು ಗಂಟೆಯ ಕಾಲ ತಮ್ಮ ಸಿನಿಮಾದಲ್ಲಿ ನಟಿಸಲು ಕೇಳಿಕೊಂಡಾಗಲೂ, ನಾನು ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ನಟಿಸುವುದಿಲ್ಲ ಎಂದು ಖಡಾಖಂಡಿತವಾಗಿ ನಿರಾಕರಿಸಿದ ಅವರ ಬದ್ಧತೆಯನ್ನು ನಾವು ಸ್ಮರಿಸಬೇಕು ಎಂದರು.

    ‘ಬಂಗಾರದ ಮನುಷ್ಯ’ ಸಿನಿಮಾದ ಮೂಲಕ ನೂರಾರು ಯುವಕರು ನಗರ ಪ್ರದೇಶದಿಂದ ಮರಳಿ ತಮ್ಮ ಹಳ್ಳಿಗಳಿಗೆ ಹೋಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದ ಸಂಗತಿಯನ್ನು ಮೆಲುಕು ಹಾಕಿದರು.

    ಡಾ.ರಾಜ್‌ಕುಮಾರ್ ಅವರ ಜನ್ಮದಿನವನ್ನು ಸರ್ಕಾರಿ ಮಟ್ಟದಲ್ಲಿ ಅಧಿಕೃತವಾಗಿ ಆಚರಿಸಲು ನಿರ್ಧರಿಸಿದ ಸರ್ಕಾರದ ಕ್ರಮಕ್ಕೆ ಅಭಿನಂದನೆ ತಿಳಿಸಿದ ಅವರು, ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ.ರಾಜ್ ಅವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಲಿ ಎಂದು ಹಾರೈಸಿದರು.

    ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಕನ್ನಡ ಚಿತ್ರರಂಗದ ಧ್ರುವತಾರೆ ಡಾ.ರಾಜ್ ಕುಮಾರ್ ಅವರು ಕೇವಲ ಒಬ್ಬ ನಟರಾಗಿರಲಿಲ್ಲ, ಅವರು ಇಡೀ ಕರ್ನಾಟಕದ ಮನೆಮನ ಬೆಳಗಿದ ಸಂಸ್ಕೃತಿಯ ಪ್ರತೀಕವಾಗಿದ್ದರು. ಅಣ್ಣಾವ್ರಿಗೂ ಬಳ್ಳಾರಿಗೂ ಅವಿನಾಭಾವ ಸಂಬಂಧ ಹೊಂದಿದ್ದರು ಎಂದು ಹೇಳಿದರು.

    ಸಾಮಾನ್ಯವಾಗಿ ಯಾವುದೇ ರಂಗದಲ್ಲಿ ಯಶಸ್ಸು ಸಿಕ್ಕ ತಕ್ಷಣ ಜನರು ರಾಜಕೀಯಕ್ಕೆ ಬರಲು ಬಯಸುತ್ತಾರೆ. ಆದರೆ ಅಣ್ಣಾವ್ರು ತಮಗೆ ಮುಖ್ಯಮಂತ್ರಿಯಾಗುವ ಅತಿ ದೊಡ್ಡ ಅವಕಾಶಗಳಿದ್ದರೂ, ನಾನು ಇಡೀ ಕನ್ನಡ ನಾಡಿನ ಮಗನಾಗಿ ಇರಲು ಬಯಸುತ್ತೇನೆ ಎಂದು ರಾಜಕೀಯವನ್ನು ನಯವಾಗಿ ತಿರಸ್ಕರಿಸಿದ್ದರು ಎಂದು ತಿಳಿಸಿದರು.

    ಎಷ್ಟೇ ದೊಡ್ಡ ಹೆಸರು ಮತ್ತು ಯಶಸ್ಸು ಗಳಿಸಿದರೂ ಇತರರಿಗೆ ಗೌರವ ನೀಡುವುದು ಮತ್ತು ಸಜ್ಜನಿಕೆಯಿಂದ ವರ್ತಿಸುವುದನ್ನು ಅಣ್ಣಾವ್ರಿಂದ ಕಲಿಯಬೇಕು. ಇಂದಿಗೂ ಸಿನಿಮಾ ರಂಗದಲ್ಲಿ ಯಾರಾದರೂ ಅಹಂಕಾರದಿಂದ ವರ್ತಿಸಿದರೆ, ಜನರು ತಕ್ಷಣವೇ ಅಣ್ಣಾವ್ರ ಸರಳತೆಯನ್ನು ಉದಾಹರಿಸುತ್ತಾರೆ. ಅವರ ಪ್ರಭಾವ ಅಷ್ಟು ಆಳವಾಗಿದೆ ಎಂದರು.

    ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಮಾತನಾಡಿ, ಡಾ.ರಾಜ್ ಕುಮಾರ್ ಅವರು ಕೇವಲ ನಟರಲ್ಲ, ಅವರು ಕನ್ನಡ ಸಂಸ್ಕೃತಿಯ ರಾಯಭಾರಿ. ಅವರ ‘ಬಂಗಾರದ ಮನುಷ್ಯ’, ‘ಗುರಿ’ ನಂತಹ ಚಿತ್ರಗಳು ಇಂದಿಗೂ ಸಮಾಜಕ್ಕೆ ಮಾದರಿಯಾಗಿವೆ ಎಂದು ಸ್ಮರಿಸಿದರು.

    ಡಾ. ರಾಜ್ ಹಾಡುಗಳ ಸಾಹಿತ್ಯದಲ್ಲಿರುವ ಜೀವನ ಮೌಲ್ಯಗಳು ಆಳವಾಗಿ ಬೇರೂರಿವೆ. ‘ಆಡಿಸಿ ನೋಡು ಬೀಳಿಸಿ ನೋಡು…’ ನಂತಹ ಹಾಡುಗಳು ಇಂದಿಗೂ ಜೀವನಕ್ಕೆ ಸ್ಫೂರ್ತಿಯಾಗಿವೆ. ಡಾ. ರಾಜ್‌ಕುಮಾರ್ ಅವರಿಗೆ ಅವರೇ ಸಾಟಿ. ಅವರ ಕೊಡುಗೆ ನಾಡು, ನುಡಿ ಮತ್ತು ಕಲೆಗೆ ಅನನ್ಯವಾದುದು. ಅವರ ಜನ್ಮದಿನವನ್ನು ಆಚರಿಸುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ ಗುರುರಾಜ್, ಪ್ರದಸ ನವೀನ್ ಕುಮಾರ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಡಾ.ರಾಜ್ ಕುಮಾರ್ ಅಭಿಮಾನಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.