nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026
    Facebook Twitter Instagram
    ಟ್ರೆಂಡಿಂಗ್
    • ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ
    • ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    • ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಟ್ಟೂರಿನಲ್ಲೇ ಡಾ.ಸುಧಾಕರ್ ಗೆ ಸಿಕ್ಕಿರೋದು 600 ಮತಗಳು: ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ
    ರಾಜ್ಯ ಸುದ್ದಿ July 30, 2023

    ಹುಟ್ಟೂರಿನಲ್ಲೇ ಡಾ.ಸುಧಾಕರ್ ಗೆ ಸಿಕ್ಕಿರೋದು 600 ಮತಗಳು: ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ

    By adminJuly 30, 2023No Comments2 Mins Read
    sudhakar

    ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯಲ್ಲಿ ಡೂಮ್ ಕಟ್ಟಲು 20 ಕೋಟಿ ರೂಪಾಯಿಗಳನ್ನು ವ್ಯಯಿಸಿದ್ದು, ಇದರಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನಗಳು ಮೂಡಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ.

    ಇಂದು ಸುಧಾಕರ್ ಅವರ ಕಾಲದಲ್ಲಿ ನಡೆದಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ಅವರು ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿದ್ದಾರೆ. ಅದರಲ್ಲಿ ಕಾಲೇಜಿನ ವಿನ್ಯಾಸಕ್ಕಾಗಿ ಡೂಮ್ ಕಟ್ಟಲು 20 ಕೋಟಿ ವೆಚ್ಚವಾಗಿದೆ ಎಂದು ತೋರಿಸಿದ್ದಾರೆ. ಡೂಮ್ ಕಟ್ಟಲು ಅಷ್ಟು ಹಣ ವೆಚ್ಚವಾಗುತ್ತಾ? ಇದರಲ್ಲಿ ಅವ್ಯವಹಾರ ನಡೆದಿರುವ ಸಾಧ್ಯಾಸಾಧ್ಯತೆ ಇದೆ ಎಂದು ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ.


    Provided by
    Provided by

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ನನ್ಮ ವಿರುದ್ಧ ಪರಾಭವಗೊಂಡಿರುವ ಮಾಜಿ ಸಚಿವ ಡಾ.ಕೆ.ಸುಧಾಕರ್, ಕಾಂಗ್ರೆಸ್‌ನ ಕದ ತಟ್ಟುತ್ತಿದ್ದಾರೆ ಎಂದು, ಶಾಸಕ ಪ್ರದೀಪ್ ಈಶ್ವರ್, ಸುಧಾಕರ್‌ ಗೆ ಟಕ್ಕರ್ ಕೊಟ್ಟಿದ್ದಾರೆ.

    ಮಾಧ್ಯಮಗಳ ಮುಂದೆ ಮಾತನಾಡಿದ ಪ್ರದೀಪ್ ಈಶ್ವರ್, ಸುಧಾಕರ್ ಅವರಿಗೆ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಈಗಾಗಲೇ ಸುಧಾಕರ್ ಮೂರ್ನಾಲ್ಕು ಮಂದಿ ಸ್ಥಳೀಯ ಕಾಂಗ್ರೆಸ್‌ ನ ನಾಯಕರ ಸಂಪರ್ಕ ಮಾಡಿಕೊಂಡು, ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಸಂಪರ್ಕಕ್ಕೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅದು ಸಾಧ್ಯವೇ ಇಲ್ಲ ಎಂದು ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಪೆರೇಸಂದ್ರ ಸುಧಾಕರ್ ಅವರ ಹುಟ್ಟೂರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ, ಡಾ. ಕೆ. ಸುಧಾಕರ್ ಅವರಿಗೆ ಸಿಕ್ಕಿದ್ದು 600 ಮತಗಳು. ನಾನು ಕೂಡ ಅದೇ ಊರಿನವನು. ನನಗೆ ಸಿಕ್ಕಿದ್ದು 1600 ಮತಗಳು. ಅಲ್ಲಿಗೆ ಏನು ಅರ್ಥ ಇದು? ಈ ಬಾರಿ ಅವರ ಹುಟ್ಟೂರಿನ ಜನರೇ ಸುಧಾಕರ್ ಅವರನ್ನು ವಿರೋಧಿಸಿದ್ದಾರೆ ಎಂದು ಅರ್ಥ ಅಲ್ಲವೇ? ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ಶಾಸಕ ಪ್ರದೀಪ್ ಈಶ್ವ‌ ವ್ಯಂಗ್ಯವಾಡಿದ್ದಾರೆ.

    ಮಾಜಿ ಡಾ.ಕೆ.ಸುಧಾಕರ್ ಕಾಂಗ್ರೆಸ್‌ಗೆ ಬರಲು ಹರಸಾಹಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರಿಗೆ ಕಾಂಗ್ರೆಸ್‌ ಗೆ ಬರಲು ಅವಕಾಶ ಇಲ್ಲ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವ‌ ಹೇಳಿದ್ದಾರೆ. ಸುಧಾಕರ್ ಅವರು ಕಾಂಗ್ರೆಸ್‌ಗೆ ಬಂದು, ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಕೇಳುತ್ತಿದ್ದಾರೆ. ಅದ್ರೆ ಲೋಕಸಭಾ ಚುನಾವಣೆಯ ಟಿಕೆಟ್ ಅಲ್ಲ, ಸುಧಾಕರ್ ಅವರಿಗೆ ಜಿಲ್ಲಾ ಪಂಚಾಯತ್‌ನ ಟಿಕೆಟ್ ಕೂಡ ನೀಡಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ರಾಘವೇಂದ್ರ ಅಡಿಗ ಎಚ್ಚೆನ್ ಬೆಟ್ಟಿಂಗ್ ಆಟ ಹಿನ್ನೆಲೆಯ ಕಥೆ ಇರುವ  ‘ಲೂಪ್’ ಚಿತ್ರದ ಟ್ರೈಲರ್ ಮತ್ತಿತರೆ ಕಂಟೆಂಟ್ ಗಳು ಈಗಾಗಲೇ…

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.