ಬೆಂಗಳೂರು ನಗರದಲ್ಲಿ ಡಾ. ಟಿ. ಆರ್. ಚಂದ್ರಶೇಖರ್ ಅವರ ‘ನಿರುದ್ಯೋಗ’ ಕೃತಿ ಲೋಕಾರ್ಪಣೆ ಹಾಗೂ ವಿಶೇಷ ಉಪನ್ಯಾಸದಲ್ಲಿ ಕಾರ್ಯಕ್ರಮ ಜರುಗಿತು. ನವದೆಹಲಿಯ ಅರ್ಥಶಾಸ್ತ್ರಜ್ಞ ಪ್ರೊ. ಪ್ರಭಾತ್ ಪಟ್ನಾಯಿಕ್ ಮಾತನಾಡಿ, ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರವು ಅಸ್ತಿತ್ವಕ್ಕೆ ಬಂದ ಮೇಲೆ ಉದ್ಯೋಗ ಆಧಾರಿತ ಅಭಿವೃದ್ಧಿಗೆ ಆದ್ಯತೆ ಸಿಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
ಬಂಡವಾಳ ಶಾಹಿಗಳಿಗೆ ಪೂರಕವಾದ ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಕೈಗೆಗಳಿಗೆ ಕೆಲಸ ನೀಡಲು ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರೆ ಯೋಜನೆಯನ್ನು ಇನ್ನೂ ಸಮಗ್ರವಾಗಿ ಜಾರಿಗೆ ತರಬೇಕಿತ್ತು. ಆದರೆ, ಕೆಲಸವನ್ನು ಕೇಂದ್ರ ಮಾಡಲಿಲ್ಲ. ನಗರ ಕೇಂದ್ರಿತ ಉದ್ಯೋಗಕ್ಕೆ ಆದ್ಯತೆ ನೀಡಬೇಕಿತ್ತು’ ಎಂದು ಹೇಳಿದರು. ‘ಕೇಂದ್ರವು ನವ ಉದಾರೀಕರಣ ನೀತಿಯನ್ನು ಅತ್ಯಂತ ವೇಗವಾಗಿ ಜಾರಿಗೆ ತಂದಿದ್ದರ ಪರಿಣಾಮ ಭಾರತದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರಗೊಂಡಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
ನಿರುದ್ಯೋಗ ಸಮಸ್ಯೆಯಿಂದ ದೇಶದ ಅಭಿವೃದ್ಧಿಯೂ ಕುಂಠಿತಗೊಳ್ಳಲಿದೆ. ಜನರಲ್ಲಿ ಖರೀದಿಸುವ ಸಾಮರ್ಥ್ಯ ಹೆಚ್ಚಿಸಬೇಕಿತ್ತು. ಅದನ್ನೂ ಮಾಡಿಲ್ಲ. ಬರೀ ಬಂಡವಾಳಶಾ ಹಿಗಳನ್ನೇ ಬೆಳೆಸುತ್ತಿದೆ’ ಎಂದರು. ‘ಬಡವರಿಗೆ ಅಕ್ಕಿ ನೀಡುವ ವಿಚಾರದಲ್ಲೂ ಕೇಂದ್ರವು ರಾಜಕೀಯ ಮಾಡಿದೆ.
ಇಂತಹ ಹೀನಾಯ ಸ್ಥಿತಿಗೆ ಬಿಜೆಪಿ ಇಳಿಯಬಾರದಿತ್ತು’ ಎಂದು ಹೇಳಿದರು. ನಿವೃತ್ತ ನ್ಯಾಯಮೂರ್ತಿ ಎಚ್. ಎನ್. ನಾಗ ಮೋಹನ್ ದಾಸ್ ಮಾತನಾಡಿ, ‘ನಿರುದ್ಯೋಗ ಸಮಸ್ಯೆ ಹೆಚ್ಚಳದಿಂದ ಭಯೋತ್ಪಾದನೆ, ಕೋಮುವಾದ, ಮೂಲಭೂತವಾದ, ಅಪರಾಧ ಚಟುವಟಿಕೆಗಳು ಹೆಚ್ಚಲಿವೆ. ಮೊದಲು ನಿರುದ್ಯೋಗ ಸಮಸ್ಯೆ ನಿವಾರಿಸಬೇಕು’ ಎಂದು ಆಗ್ರಹಿಸಿದರು. ಜನಪ್ರಕಾಶನದ ಬಿ. ರಾಜಶೇಖರಮೂರ್ತಿ ಹಾಗೂ ಕಿಗ್ಗ ರಾಜಶೇಖರ್ ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


