ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುನಿಸಿಪಲ್ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿಶ್ರಾಂತ ಕರ್ನಲ್ ಆಗಿರುವ ಅಶೋಕ್ ಅವರನ್ನು ರಾಜ್ಯ ಸರ್ಕಾರವು ಕೆ.ಆರ್.ಪೇಟೆ ತಹಶೀಲ್ದಾರ್ ಆಗಿ ನೇಮಿಸಿ ಸ್ಥಳನಿಯುಕ್ತಿಗೊಳಿಸಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಸರ್ಗಪ್ರಿಯಾ ಅವರು ಪಿರಿಯಾಪಟ್ಟಣ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡು ಖಾಲಿಯಾಗಿಯೇ ಉಳಿದಿದ್ದ ತಹಶೀಲ್ದಾರ್ ಹುದ್ದೆಗೆ ಪ್ರಭಾರ ತಹಶೀಲ್ದಾರ್ ಆಗಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದರ್ಶ ಕಾರ್ಯ ನಿರ್ವಹಿಸುತ್ತಿದ್ದರು. ಎರಡು ತಿಂಗಳ ನಂತರ ಸರ್ಕಾರವು ಕೆ. ಆರ್.ಪೇಟೆ ತಹಶೀಲ್ದಾರ್ ಆಗಿ ಡಾ.ಅಶೋಕ್ ಅವರನ್ನು ಅಧಿಕೃತವಾಗಿ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಇಂದು ಅಶೋಕ್ ಅಧಿಕಾರ ಸ್ವೀಕರಿಸಿದರು.
ನಾನು ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸಿದ್ದೇನೆ. ಮುಕ್ತ ನ್ಯಾಯ ಸಮ್ಮತವಾಗಿ ಕರ್ತವ್ಯ ನಿರ್ವಹಿಸಲು ಪಣ ತೊಟ್ಟಿರುವ ನಾನು ಭ್ರಷ್ಟಾಚಾರ ಮುಕ್ತವಾಗಿ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಜೊತೆಗೆ ಬಡ ಜನರು ಹಾಗೂ ರೈತ ಬಾಂಧವರ ಜೊತೆಗೆ ಬೆರೆತು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಪರಿಹಾರ ದೊರಕಿಸಿಕೊಡಲು ಬದ್ಧತೆಯಿಂದ ಕೆಲಸ ಮಾಡುತ್ತೇನೆ ಎಂದು ಡಾ.ಅಶೋಕ್ ಹೇಳಿದರು.
ಈ ಸಂದರ್ಭದಲ್ಲಿ ರಾಜಶ್ವನಿರೀಕ್ಷಕರು ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ತಾಲ್ಲೋಕಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು
ವರದಿ: ಮಂಜು, ಶ್ರವಣೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q