ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕಾಗಿ ಅವರ ಪತ್ನಿ ಭಾರತಿ ವಿಷ್ಣುವರ್ಧನ್ ಮತ್ತು ಅಳಿಯ ನಟ ಅನಿರುದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಕೆಂಗೇರಿ ರಿಂಗ್ ರೋಡ್‌ನಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿ 10 ಗುಂಟೆ ಜಾಗವನ್ನು ವಿಷ್ಣುವರ್ಧನ್ ಸ್ಮಾರಕಕ್ಕಾಗಿ ಮೀಸಲಿಡುವಂತೆ ಅವರು ಕೋರಿದ್ದಾರೆ.
ಈ ಭೇಟಿಯು ಕಾವೇರಿ ನಿವಾಸದಲ್ಲಿ ನಡೆದಿದ್ದು, ಅಭಿಮಾನಿಗಳ ಬಹುದಿನದ ಬೇಡಿಕೆಯು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC