ಮಧುಗಿರಿ: ಕರ್ನಾಟಕ ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25ರಂದು ಮಧುಗಿರಿ ತಾಲೂಕು ಕಚೇರಿಯಲ್ಲಿ ಪುರಸಭಾ ಕಚೇರಿಯಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲೇ ನಾಡಕಚೇರಿಗಳಲ್ಲಿ ಪ್ರಚುರಪಡಿಸಿದ ಮತದಾರ ಮತದಾರರ ಪಟ್ಟಿ ಪರಿಶೀಲನೆಗೆ ತಾಲೂಕು ಕಚೇರಿ ಚುನಾವಣಾ ಶಾಖೆಯಲ್ಲಿ ಲಭ್ಯವಿರುತ್ತದೆ.
ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಮಧುಗಿರಿ ತಾಲೂಕಿನಲ್ಲಿ 4,093 ಅರ್ಜಿಗಳು ಸ್ವೀಕಾರಗೊಂಡಿದ್ದು ಅದರಲ್ಲಿ 4067 ಅರ್ಜಿಗಳು ಅಂಗೀಕಾರಗೊಂಡಿವೆ. 46 ಅರ್ಜಿಗಳು ತಿರಸ್ಕೃತ ಗೊಂಡಿವೆ. ಒಟ್ಟು 2,549 ಪುರುಷ ಮತದಾರರು 1,498 ಮಹಿಳಾ ಮತದಾರರು ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ
ನವೆಂಬರ್ 25 ರಿಂದ ಡಿಸೆಂಬರ್ 10 ವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ಅಗತ್ಯ ದಾಖಲೆಗಳೊಂದಿಗೆ ನಮೂನೆ 18ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ ಕರಡು ಮತದಾರರ ಪಟ್ಟಿಯಲ್ಲಿ ಇರುವವರು ತಿದ್ದುಪಡಿಗಳಿದ್ದಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ ಎಂದು ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


