ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಎಲ್ಲಾ 2627 ಮತಗಟ್ಟೆಗಳಲ್ಲಿ ಮಂಗಳವಾರ ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಕರಡು ಮತದಾರರ ಪಟ್ಟಿಯಲ್ಲಿ 11,40,216 ಪುರುಷರು, 11,61,932 ಮಹಿಳೆಯರು ಹಾಗೂ 89 ಇತರೆ ಸೇರಿ ಒಟ್ಟು 23,02,237 ಮತದಾರರಿದ್ದಾರೆ. ಕರಡು ಸೇವಾ ಮತದಾರರ ಪಟ್ಟಿಗಳಲ್ಲಿ 685 ಪುರುಷರು, 40 ಮಹಿಳೆಯರು ಸೇರಿ ಒಟ್ಟು 725 ಮತದಾರರಿದ್ದಾರೆ. ವಿಶೇಷ ಚೇತನ ಮತದಾರರಿಗೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಒಟ್ಟು 32,010 ಮತದಾರರನ್ನು ನೋಂದಣಿ ಮಾಡಲಾಗಿದೆ.
ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬAಧಿಸಿದAತೆ ಅಕ್ಟೋಬರ್ 29 ರಿಂದ ನವೆಂಬರ್ 28ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು. ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಪ್ರತಿ ವರ್ಷ 1ನೇ ಜನವರಿ ಯನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ, ಪರಿಷ್ಕರಣೆ ಕಾರ್ಯ ನಡೆಸಲಾಗುತ್ತಿತ್ತು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಸ್ತುತ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್ ಅನ್ನು ಅರ್ಹತಾ ದಿನಾಂಕಗಳೆಂದು ಗೊತ್ತುಪಡಿಸಲಾಗಿದ್ದು, ಆಯಾ ದಿನಾಂಕಗಳಿಗೆ 18 ವರ್ಷ ತುಂಬಲಿರುವ ಯುವ ಮತದಾರರು ಸೇರ್ಪಡೆಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಂಬಂಧಪಟ್ಟ ಬಿಎಲ್ ಒ/ಎ.ಇ.ಆರ್.ಒ.,/ಇ.ಆರ್.ಒ.ಗಳು ಸದರಿ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ವಿಲೇಪಡಿಸಲು ಕ್ರಮವಹಿಸಲಿದ್ದಾರೆ.
ಎಲ್ಲಾ ಅರ್ಹ ಮತದಾರರು ಮತದಾರರ ಪಟ್ಟಿ ಪರಿಷ್ಕರಣೆಯ ಸದುಪಯೋಗವನ್ನು ಪಡೆದು, ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ನಿಗಧಿತ ನಮೂನೆಗಳಲ್ಲಿ ನವೆಂಬರ್ 28ರೊಳಗಾಗಿ ಆನ್‌ಲೈನ್ ಮೂಲಕ (Voter Helpline App/NVSP) ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296