ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಹಾಗೂ ಪಾಲಿಕೆ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಹಾಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.
ನಗರದ ಅರ್ಹ ಮತದಾರರು ಸಂಬಂಧಿಸಿದ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್ ಓ)ಯ ಮೂಲಕ ಪ್ರಕಟಿತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿಯಾಗಿರುವ ಬಗ್ಗೆ ಪರಿಶೀಲಿಸಿ ಖಚಿತ ಪಡಿಸಿಕೊಳ್ಳಬೇಕು ಅಥವಾ ಮತದಾರರು ಸ್ವತಃ ಆನ್‌ಲೈನ್ ಮೂಲಕ ಗೂಗಲ್ ಪ್ಲೇ ಸ್ಟೋರ್‌ನಲ್ಲಿ VHA– Voter Helpline App ಅನ್ನು ಡೌನ್ ಲೋಡ್ ಮಾಡಿಕೊಂಡು ನೇರವಾಗಿ ಪರಿಶೀಲಿಸಿಕೊಳ್ಳಬಹುದಾಗಿದೆ.
ಮತದಾರರ ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು ನೋಂದಣಿಯಾಗದೇ ಇದ್ದಲ್ಲಿ ನಿಗಧಿತ ನಮೂನೆ–6, ಕೈಬಿಡತಕ್ಕ ಪ್ರಕರಣ ಇದ್ದಲ್ಲಿ ನಿಗಧಿತ ನಮೂನೆ–7 ಮತ್ತು ತಿದ್ದುಪಡಿ ಅಗತ್ಯವಿದ್ದಲ್ಲಿ ನಮೂನೆ–8ನ್ನು ಭರ್ತಿ ಮಾಡಿ ಸಂಬಂಧಿಸಿದ ಬಿಎಲ್ ಓಗಳಿಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296