ದೆಹಲಿಯಲ್ಲಿ ಡ್ರಗ್ಸ್ ಖರೀದಿಸಲು ಹಣ ನೀಡಲು ನಿರಾಕರಿಸಿದ ಯುವಕನೊಬ್ಬ ತನ್ನ ತಂದೆಯನ್ನು ಕೊಂದಿದ್ದಾನೆ. ನಿನ್ನೆ ವಾಯುವ್ಯ ದೆಹಲಿಯ ಸುಭಾಷ್ ಪ್ಲೇಸ್ ನಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನವದೆಹಲಿಯ ಶಕುರ್ ಪುರ್ ಗ್ರಾಮದ ಸುರೇಶ್ ಕುಮಾರ್ ಕೊಲೆಯಾದವರು.ದೆಹಲಿಯ ಸುಭಾಷ್ ಪ್ಲೇಸ್‌ನಲ್ಲಿ ವಿವಾದ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ದೆಹಲಿ ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿಗಳು ಸುರೇಶ್ ಗಾಯಗೊಂಡು ನೆಲದ ಮೇಲೆ ಬಿದ್ದಿರುವುದನ್ನು ನೋಡಿದ್ದಾರೆ. ದೇಹದಾದ್ಯಂತ ಗಾಯಗಳು ಮತ್ತು ರಕ್ತದ ಕಲೆಗಳಿದ್ದವು. ನಂತರ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಹಣದ ವಿಚಾರದಲ್ಲಿ ಮಗ ಅಜಯ್ ಜೊತೆಗಿನ ವಾಗ್ವಾದವು ಹಲ್ಲೆ ನಡೆಸಿ ತಂದೆ ಸುರೇಶ್ ಅವರ ಸಾವಿಗೆ ಕಾರಣವಾಯಿತು ಎಂದು ವಾಯುವ್ಯ ದೆಹಲಿಯ ಉಪ ಪೊಲೀಸ್ ಆಯುಕ್ತ ಉಷಾ ರಂಗನಾನಿ ಹೇಳಿದ್ದಾರೆ.
ಡ್ರಗ್ಸ್ ಖರೀದಿಸಲು ಹಣ ಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನಡೆದ ಜಗಳದಲ್ಲಿ ಸುರೇಶ್‌ಗೆ ಮಗ ಥಳಿಸಿದ್ದಾನೆ. ಮಗ ಅಜಯ್ ನನ್ನು ಪೊಲೀಸರು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


