ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವರು ಶುಭಾಶಯ ಕೋರಿದ್ದು ಬಿಜೆಪಿ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ದ್ರೌಪದಿ ಮುರ್ಮು ಅವರಿಗೆ 5,121 ಮತಗಳು ಬಿದ್ದಿವೆ. ಈ ಮತಗಳ ಒಟ್ಟು ಮೌಲ್ಯ 5,77,777 ಆಗಿದೆ. ಇನ್ನು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ 1,058 ಮತಗಳು ಬಿದ್ದಿದ್ದು ಇದರ ಮೌಲ್ಯ 2,61,062 ಆಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz