ದೇಶದ ಅತ್ಯುನ್ನತ ಹುದ್ದೆಯ್ದಾ ರಾಷ್ಟ್ರಧ್ಯಕ್ಷರಾಗಿ ದ್ರೌಪದಿ ಮುರ್ಮ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಸೋಮವಾರ ಬೆಳಗ್ಗೆ 10.15ಕ್ಕೆ ಸಮಾರಂಭ ನಡೆಯಲಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೂತನ ರಾಷ್ಟ್ರಾಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ರಾಷ್ಟ್ರಪತಿಯವರು 21 ಗನ್ ಸೆಲ್ಯೂಟ್ ಸ್ವೀಕರಿಸಿದ ಬಳಿಕ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಂತರ ಭಾಷಣ ಮಾಡಲಿದ್ದಾರೆ. ಸಮಾರಂಭಕ್ಕೂ ಮೊದಲು ನಿರ್ಗಮಿತ ಅಧ್ಯಕ್ಷರು ಮತ್ತು ನೂತನ ಅಧ್ಯಕ್ಷರು ವಿಧ್ಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ ಆಗಮಿಸಲಿದ್ದಾರೆ.
ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು ಮತ್ತು ಪ್ರಧಾನ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz