ತುಮಕೂರು: ತುಮಕೂರು ದಸರಾ ಉತ್ಸವಕ್ಕೆ ಆಗಮಿಸಲಿರುವ ವಿಶೇಷ 35 ವಿಂಟೇಜ್ ಕಾರುಗಳಿಗೆ ವಿಧಾನಸೌಧದ ಮುಂಭಾಗದಲ್ಲಿ ಅಕ್ಟೋಬರ್ 11 ಬೆಳಿಗ್ಗೆ 7:30 ಗಂಟೆಗೆ ನವದೆಹಲಿ ವಿಶೇಷ ಪ್ರತಿನಿಧಿ ಶಿರಾ ಶಾಸಕ ಟಿ.ಬಿ.ಜಯಚಂದ್ರ ಮತ್ತು ಕುಣಿಗಲ್ ಶಾಸಕ ಡಾ.ಹೆಚ್.ಡಿ.ರಂಗನಾಥ್ ಚಾಲನೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದ ಜಂಟಿ ಸಾರಿಗೆ ಆಯುಕ್ತ ಎನ್.ಜಿ. ಗಾಯಿತ್ರಿದೇವಿ, ಕರ್ನಾಟಕ ವಿಂಟೇಜ್ ಆಂಡ್ ಕ್ಲಾಸಿಕ್ ಕಾರ್ ಕ್ಲಬ್ ಅಧ್ಯಕ್ಷ ಬಾಲ್ ಚಂದ್ ಎ. ಯಡ್ಲಾಂ, ಉಪಾಧ್ಯಕ್ಷ ಪಿ.ಎ. ಸುರೇಶ್ ಮತ್ತು ಕಾರ್ಯದರ್ಶಿ ಟಿ.ಆರ್. ರಘುನಂದನ್ ಉಪಸ್ಥಿತರಿರುತ್ತಾರೆ.
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 11ರಂದು ವಿಂಟೇಜ್ ಕಾರುಗಳ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಕಾರು ಪ್ರಿಯರು ಈ ಪ್ರದರ್ಶನದ ಪ್ರಯೋಜನ ಪಡೆಯಬಹುದೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಸಾದ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q