ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿ ಕಾರು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಗುಬ್ಬಿ ತಾಲೂಕಿನ ಜಿ ಹೊಸಳ್ಳಿ ಸಮೀಪ ನಡೆದಿದೆ.
ತಾಲೂಕಿನ ಕಡಬ ಹೋಬಳಿ ಜೀಗನಹಳ್ಳಿ ಗ್ರಾಮದ ವಾಸಿಯಾದ ರಾಕೇಶ್ (31) ಮೃತಪಟ್ಟವರು. ತೋಟದ ಮನೆಯಲ್ಲಿ ವಾಸ ಮಾಡುತ್ತಿದ್ದ ಇವರು ಕೆಲಸ ನಿಮಿತ್ತ ತನ್ನ ಸಂಬಂಧಿ ಜೊತೆ ತುಮಕೂರಿಗೆ ತೆರಳಿದ್ದರು. ಕೆಲಸ ಮುಗಿದ ನಂತರ ವಾಪಸ್ ರಾಕೇಶ್ ಹಾಗೂ ಇಬ್ಬರು ಸ್ನೇಹಿತರ ಜೊತೆಯಲ್ಲಿ ಮಲ್ಲಸಂದ್ರ ಡಾಬಾ ಹತ್ತಿರ ಊಟ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ವಿದ್ಯುತ್ ಕಂಬದ ತಂತಿಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ,ಡಿ,ವೈ,ಎಸ್ಪಿ,ಶೇಖರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಶ್ವಾನದಳ ಹಾಗೂ ಬೆರಳಚ್ಚು ತಂತ್ರಜ್ಞಾನ ವಿಭಾಗದವರು ಪರಿಶೀಲನೆ ನಡೆಸಿ ಶವವನ್ನು ಹೆಚ್ಚಿನ ತನಿಖೆಗಾಗಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4