ತುಮಕೂರು: ಚಲಿಸುತ್ತಿದ್ದ ಬಸ್ ನಲ್ಲಿ ಮೂರ್ಛೇ ಹೋದ ಪ್ರಯಾಣಿಕನನ್ನು ತಕ್ಷಣ ಚಿಕಿತ್ಸೆ ಕೊಡಿಸಲು ಬಸ್ ನ ಚಾಲಕ ಮತ್ತು ನಿರ್ವಾಹಕ ಸಮಯ ಪ್ರಜ್ಞೆ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಬಸ್ ನಲ್ಲಿಯೇ ಮೂರ್ಛೇ ತಪ್ಪಿ ಬಿದ್ದು ಪ್ರಯಾಣಿಕನಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಪ್ರಯಾಣಿಕರ ಸಮೇತ ಬಸ್ ಅನ್ನು ಆಸ್ಪತ್ರೆ ಕಡೆ ಓಡಿಸಿದ ಚಾಲಕ ಪ್ರಶಂಸೆಗೆ ಪಾತ್ರವಾಗಿದ್ದಾನೆ.
ತುಮಕೂರಿನ ತಿಪಟೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಆಂಬ್ಯುಲೆನ್ಸ್ ರೀತಿ ಬಸ್ ಚಲಾಯಿಸಿದ ಚಾಲಕ ಪ್ರಯಾಣಿಕನ ಪ್ರಾಣ ಉಳಿಸಿ ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗದಿಂದ- ಬೆಂಗಳೂರಿಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಇದಾಗಿತ್ತು, ಈಶ್ವರ್ ರೆಡ್ಡಿ ಎಂಬವರು ಅಸ್ವಸ್ಥರಾದವರಾಗಿದ್ದಾರೆ. ಇವರು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು.
ಬಸ್ ತಿಪಟೂರು ನಿಲ್ದಾಣ ತಲುಪಿದಾಗ ಉಸಿರಾಡಲು ಸಾಧ್ಯವಾಗದೆ ಮೂರ್ಛೇ ತಪ್ಪಿದ್ದರು. ಬಿದ್ದ ರಭಸಕ್ಕೆ ಮೂಗಿನಲ್ಲಿ ರಕ್ತ ಸ್ರಾವವಾಗಿತ್ತು. ಕೂಡಲೇ ಇದನ್ನು ಗಮನಿಸಿದ ನಿರ್ವಾಹಕ ಓಂಕಾರ್, ಚಾಲಕನಿಗೆ ತಿಳಿಸಿದ್ದಾರೆ. ಕೂಡಲೇ ಚಾಲಕ ಪ್ರಕಾಶ್ ಬಸ್ ಅನ್ನು ತಿಪಟೂರು ತಾಲ್ಲೂಕು ಆಸ್ಪತ್ರೆಗೆ ಚಲಾಯಿಸಿದ್ದಾರೆ.
ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ಸೇರಿಸಿದ ಪರಿಣಾಮ ಈಶ್ವರ್ ರೆಡ್ಡಿ ಪ್ರಾಣ ಉಳಿದಿದೆ. ಚಾಲಕ- ನಿರ್ವಾಹಕನ ಮಾನವೀಯತೆಯನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


