ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪ್ರಬಲ ಸಂದೇಶ ರವಾನಿಸುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು ಈ ವರ್ಷದ ಜನವರಿಯಿಂದ ಸೆಪ್ಟೆಂಬರ್ ವರೆಗೆ 772 ಜನರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ್ದಾರೆ.
ಭಾರೀ ಸದ್ದು ಮಾಡುವ ಸೈಲೆನ್ಸರ್ ಗಳಂತಹ ಅಕ್ರಮ ಪರಿಕರಗಳ ಅಳವಡಿಕೆಗಾಗಿ ಎಂಟು ವಾಹನಗಳ ನೋಂದಣಿ ಪ್ರಮಾಣಪತ್ರಗಳನ್ನು (ಆರ್ಸಿ) ಸಾರಿಗೆ ಇಲಾಖೆ ಅಮಾನತುಗೊಳಿಸಲಾಗಿದೆ. ವಿವಿಧ ರೀತಿಯ ಉಲ್ಲಂಘನೆಗಳಿಗಾಗಿ 1,700 ಪರವಾನಿಗೆಗಳನ್ನು ಅಮಾನತುಗೊಳಿಸಲು ಶಿಫಾರಸು ಮಾಡಿದೆ.


