ತುಮಕೂರು: ಸೋಡಿಯಂ ಮೆಟಲ್ ಬಳಸಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಧುಗಿರಿ ನ್ಯಾಯಾಧೀಶರ ಬಳಿ ಹೆಚ್ಚಿನ ವಿಚಾರಣೆ ಮನವಿ ಹಿನ್ನಲೆ ಡ್ರೋನ್ ಪ್ರತಾಪ್ ಗೆ 3 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಬಿಗ್ ಬಾಸ್ ಖ್ಯಾತಿ ಡ್ರೋನ್ ಪ್ರತಾಪ್ ಸೇರಿ ಮೂವರ ಮೇಲೆ ಎಫ್ ಐಆರ್ ದಾಖಲಾಗಿತ್ತು. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರಿಂದ ಸುಮೋಟೋ ಕೇಸ್ ದಾಖಲಿಕೊಂಡು ಎಫ್ ಐಆರ್ ದಾಖಲಾಗಿತ್ತು. ಬಳಿಕ ಬೆಂಗಳೂರಿನಲ್ಲಿ ಡ್ರೋನ್ ಪ್ರತಾಪ್ ನ್ನು ಬಂಧಿಸಲಾಗಿತ್ತು.
ರೈತರ ಕೃಷಿಹೊಂಡದಲ್ಲಿ ಸೋಡಿಯಂ ಬಾಂಬ್ ಬ್ಲಾಸ್ಟ್ ಬಳಿಕ ಯೂಟ್ಯೂಬ್ ನಲ್ಲಿ ಪ್ರತಾಪ್ ವಿಡಿಯೋ ಅಪ್ಲೋಡ್ ಮಾಡಿದ್ದ. ವಿಡಿಯೋ ಆಧರಿಸಿ ಸುಮೊಟೊ ಕೇಸ್ ನಲ್ಲಿ ಎಫ್ ಐಆರ್ ದಾಖಲಾಗಿತ್ತು.
ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ರಾಯರ ಬೃಂದಾವನ ಫಾರಂ ಹೌಸ್ ನ ಕೃಷಿ ಹೊಂಡದಲ್ಲಿ ಪ್ರತಾಪ್ ಈ ಪ್ರಯೋಗ ಮಾಡಿದ್ದ. ದೊಡ್ಡ ಮಟ್ಟದಲ್ಲಿ ಸೋಡಿಯಂ ಬಳಸಿ ಈ ಪ್ರಯೋಗ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx