ಪಾವಗಡ: ತಾಲ್ಲೂಕಿನ ರೈತರಿಗೆ ಬರ ಪರಿಹಾರ ನೀಡುವಂತೆ ರೈತ ಸಂಘಗಳ ಮುಖಂಡರು, ತಹಸೀಲ್ದಾರ್ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ತಾಲೂಕಿನಲ್ಲಿ ಕೆಲವರಿಗೆ ಮಾತ್ರ ಸಹಾಯ ಧನ ದೊರೆತಿದ್ದು, ಬರಗಾಲದ ನೆರವು ಸಿಗದವರು ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆಸರೆಯಾಗುತ್ತಿದ್ದಾರೆ ಎಂದರು. ರೈತರಿಗೆ ಅನ್ಯಾಯವಾಗದಂತೆ ಬರ ಪರಿಹಾರ ಸಿಗುವಂತೆ ಮಾಡುವುದಾಗಿ ರೈತ ಸಂಘಗಳ ಮುಖಂಡರಿಗೆ ತಹಸೀಲ್ದಾರ್ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ರೈತ ಅಧ್ಯಕ್ಷ ಪೂಜಾರಪ್ಪ, ಸದಸ್ಯರಾದ ಬಡಪ್ಪ, ಗುಡಿಪಲ್ಲಪ್ಪ, ನರಸಪ್ಪ, ಹನುಮಂತರಾಯಪ್ಪ, ತಿಪ್ಪೇಸ್ವಾಮಿ, ನಡಿಪಣ್ಣ, ಸಿದ್ದಪ್ಪ, ಚಿತ್ತಯ್ಯ ಇತರರು ಇದ್ದರು.
ವರದಿ: ನಂದೀಶ್ ನಾಯ್ಕ ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


