ಬೆಂಗಳೂರು: ಸಿಸಿಬಿ ಮಾದಕವಸ್ತುಗಳ ನಿಗ್ರಹದಳ ಕಾರ್ಯಚರಣೆ ನಡೆಸಿ ನಿಷೇಧಿತ ಡ್ರಗ್ ಗಳನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ಬಂಧಿಸಿದ್ದಾರೆ. ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದಿದ್ದ ನೈಜೀರಿಯಾ ಮೂಲದ ವಿದೇಶಿ ಪ್ರಜೆ ಹೆನ್ರಿ ಚುಕ್ ವ್ಯುಮೆಕ್, ವೀಸಾ ಅವಧಿ ಮುಗಿದಿದ್ದರು ಸಹ ಅಕ್ರಮವಾಗಿ ನಗರದಲ್ಲಿ ನೆಲಸಿದ್ದ ಆರೋಪಿಗಳಾಗಿದ್ದಾರೆ.
ವಿದೇಶದಲ್ಲಿನ ಪರಿಚಯಸ್ಥ ಪೆಡ್ಲರ್ ಗಳಿಂದ ಡ್ರಗ್ ತರಿಸಿಕೊಂಡು ಹೆಚ್ಚಿನ ಬೆಲೆ ನಗರದಲ್ಲಿರುವ ವಿದ್ಯಾರ್ಥಿಗಳಿಗೆ, ಪರಿಚಯಸ್ಥರಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಾದಕವಸ್ತುಗಳ ನಿಗ್ರಹದಳ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನಿಂದ ನಾಲ್ಕು ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


